ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ಕೇವಲ ವಾರಗಳ ಕಾಲ ಬಾಕಿ ಉಳಿದಿದ್ದು, ಇದರ ಮಧ್ಯೆ ಪಕ್ಷಾಂತರ ಪರ್ವ ಮುಂದುವರೆದಿದೆ. ಸದ್ಯ ತೃಣಮೂಲ ಕಾಂಗ್ರೆಸ್ನ ಶಾಸಕಿ ದೇಬಶ್ರೀ ರಾಯ್ ಪಕ್ಷಕ್ಕೆ ಗುಡ್ಬೈ ಹೇಳಿದ್ದಾರೆ.
ದಕ್ಷಿಣ 24 ಪರಗಣ ಜಿಲ್ಲೆಯ ರೈದಿಘಿ ಕ್ಷೇತ್ರದಿಂದ ಎರಡು ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದ ನಟಿ, ರಾಜಕಾರಣಿ ದೇಬಶ್ರೀ ರಾಯ್ಗೆ ಈ ಸಲ ಟಿಎಂಸಿ ಟಿಕೆಟ್ ನಿರಾಕರಣೆ ಮಾಡಿತ್ತು. ಅದೇ ಕಾರಣಕ್ಕಾಗಿ ಅವರು ಪಕ್ಷ ತೊರೆದಿದ್ದಾರೆ ಎಂಬ ಮಾತು ಕೇಳಿ ಬಂದಿದೆ.
ಇದನ್ನೂ ಓದಿ: ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದ ಕಮಲ್ ಹಾಸನ್
ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯಲಿರುವ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದರ ಮಧ್ಯೆ ಆಡಳಿತಾರೂಢ ಪಕ್ಷದ ಅನೇಕ ಶಾಸಕರು, ಸಚಿವರು ಹಾಗೂ ಹಿರಿಯ ಮುಖಂಡರು ಬಿಜೆಪಿ ಸೇರಿಕೊಳ್ಳುತ್ತಿದ್ದು, ಇಲ್ಲಿಯವರೆಗೆ 30ಕ್ಕೂ ಅಧಿಕ ಮುಖಂಡರು ಬಿಜೆಪಿ ಸೇರಿಕೊಂಡಿದ್ದಾರೆ. ಇದು ಮಮತಾ ಬ್ಯಾನರ್ಜಿಗೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ.
ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಟಿಎಂಸಿ ನಡುವೆ ನೇರ ಸ್ಪರ್ಧೆ ಉಂಟಾಗಿದೆ.