ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದು ಮೂರು ಸೇನಾಪಡೆಗಳ ಮುಖ್ಯಸ್ಥರನ್ನು ಕರೆಯಿಸಿಕೊಡು ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.
ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರನ್ನು ಸಚಿವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಪಕ್ಷಗಳು ಯೋಜನೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
ಇದನ್ನೂ ಓದಿ: 'ಅಗ್ನಿಪಥ್' ನೇಮಕಾತಿ ವಿವರ ಬಿಡುಗಡೆ ಮಾಡಿದ ವಾಯುಸೇನೆ: ಅರ್ಹತೆ, ವೇತನ ಹೀಗಿದೆ..