ಡೆಹ್ರಾಡೂನ್: ಡೆಹ್ರಾಡೂನ್‌ನ ನೆಹರು ಕಾಲೋನಿಯ ದಲನ್‌ವಾಲಾ ನಿವಾಸಿ ಪುಷ್ಪಾ ಮುಂಜಿಯಾಲ್ ಎಂಬುವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ತಮ್ಮ ಆಸ್ತಿಯ ವಾರಸುದಾರರನ್ನಾಗಿ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಮಹಿಳೆ ಡೆಹ್ರಾಡೂನ್ ನ್ಯಾಯಾಲಯದಲ್ಲಿ ವಿಲ್ ಸಲ್ಲಿಸಿದ್ದು, ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ಪ್ರಭಾವಿತಳಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ತನ್ನ ಆಸ್ತಿಯ ಸಂಪೂರ್ಣ ವಿವರವನ್ನು ನ್ಯಾಯಾಲಯದಲ್ಲಿ ನೀಡಿದ್ದೇನೆ ಎಂದಿರುವ ಪುಷ್ಪಾ, ಆಕೆಯ ಸಾವಿನ ನಂತರ ತನ್ನ ಸಂಪೂರ್ಣ ಆಸ್ತಿಯ ಮಾಲೀಕತ್ವವನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆಕೆ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಮತ್ತು 10 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ರಾಹುಲ್ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ಅತ್ಯುನ್ನತ ತ್ಯಾಗ ಮಾಡಿದೆ ಎಂದು ಹೆಮ್ಮೆಪಟ್ಟಿದ್ದಾರೆ.
ಇದನ್ನೂ ಓದಿ: ಬೆಲೆ ಏರಿಕೆಯಿಂದ ಬೇಸತ್ತಿರುವ ಜನತೆಗೆ ಕರೆಂಟ್ ಶಾಕ್.. ಪರಿಷ್ಕೃತ ವಿದ್ಯುತ್ ದರ ಜಾರಿ!
ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗಿದ್ದರು ಮತ್ತು ಇಂದಿರಾ ಗಾಂಧಿ ಸಹ ಭಾರತದ ಪ್ರಧಾನಿಯಾಗಿದ್ದರು. ರಾಹುಲ್ ಅವರ ತಂದೆ ರಾಜೀವ್ ಗಾಂಧಿ ಅವರು ಸಹ ಭಾರತದ ಪ್ರಧಾನಿಯಾಗಿದ್ದರು. ಈಗ ಸೋನಿಯಾ ಗಾಂಧಿ ಅವರು ಪ್ರಸ್ತುತ ಎಐಸಿಸಿ ಅಧ್ಯಕ್ಷೆಯಾಗಿದ್ದಾರೆ ಮತ್ತು ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.