ETV Bharat / bharat

ದೆಹಲಿಯಲ್ಲಿ ಅಗ್ನಿ ದುರಂತ : ಏಳು ಮಂದಿ ದುರ್ಮರಣ

ಮೇಲ್ನೋಟಕ್ಕೆ ಸುಮಾರು 60 ಗುಡಿಸಲುಗಳಲ್ಲಿ ಬೆಂಕಿ ಕಾಣಿಸಿತ್ತು. ವಿಚಾರ ತಿಳಿದು 13 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ..

Delhi: 7 dead after fire breaks out in shanties of Gokulpuri area
ದೆಹಲಿಯಲ್ಲಿ ಅಗ್ನಿದುರಂತ: ಏಳು ಮಂದಿ ದುರ್ಮರಣ
author img

By

Published : Mar 12, 2022, 9:42 AM IST

Updated : Mar 12, 2022, 12:15 PM IST

ನವದೆಹಲಿ : ಗುಡಿಸಲುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿ ಶಾಮಕ ಇಲಾಖೆ ಮಾಹಿತಿ ನೀಡಿದೆ.

ಮೇಲ್ನೋಟಕ್ಕೆ ಸುಮಾರು 60 ಗುಡಿಸಲುಗಳಲ್ಲಿ ಬೆಂಕಿ ಕಾಣಿಸಿತ್ತು. ವಿಚಾರ ತಿಳಿದು 13 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ದೆಹಲಿ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.

ದೆಹಲಿಯಲ್ಲಿ ಅಗ್ನಿ ದುರಂತ

ಕೇಜ್ರಿವಾಲ್ ಸಂತಾಪ:ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ವ್ಯಕ್ತಪಡಿಸಿದ್ದು, ಗೋಕುಲಪುರಿ ಪ್ರದೇಶದಲ್ಲಿ ಅಗ್ನಿದುರಂತದಿಂದ ಸಂತ್ರಸ್ತರಾದ ಜನರನ್ನು ಭೇಟಿಯಾಗುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸೋಮನಾಥ ಟ್ರಸ್ಟ್​ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ, ಮೂಲಸೌಕರ್ಯಗಳ ಕುರಿತು ಚರ್ಚೆ

Last Updated : Mar 12, 2022, 12:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.