ನವದೆಹಲಿ : ಗೆಳೆಯನಿಂದಲೇ ಚೂರಿ ಇರಿತಕ್ಕೊಳಗಾಗಿ 22 ವರ್ಷದ ಯುವತಿ ಮೃತಪಟ್ಟಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪ್ರದೇಶದಲ್ಲಿ ನಡೆದಿದೆ.
ಓಂ ವಿಹಾರ್ ಪ್ರದೇಶದಲ್ಲಿ ವಾಸವಾಗಿರುವ ಯುವತಿಯನ್ನು ಆರೋಪಿ ಪ್ರೀತಿಸುತ್ತಿದ್ದ. ಆದರೆ, ಆತನ ಪ್ರೇಮ ನಿವೇದನೆಗೆ ಯುವತಿ ಒಪ್ಪಿರಲಿಲ್ಲ ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ತನ್ನ ಸ್ನೇಹಿತರನ್ನು ಭೇಟಿಯಾಗಲು ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿ, ಮತಿಯಾಲಾ ರಸ್ತೆಯ ಬಳಿ ಶವವಾಗಿ ಪತ್ತೆಯಾಗಿದ್ದಾಳೆ.
ಇದನ್ನೂ ಓದಿ: ಪತ್ನಿ ಫೋಟೋಗೆ ಹೂ ತರಲೆಂದು ನಡೆದು ಬರುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಲಾರಿ
ಕೊಲೆಯಲ್ಲಿ ಮೂವರು ಯುವಕರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಕೆಯ ಗೆಳೆಯ ಹಾಗೂ ಇತರ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.