ETV Bharat / bharat

ರೈತ ಪ್ರತಿಭಟನೆಗೆ ದೆಹಲಿ ಸಿಎಂ ಬೆಂಬಲ: ಸೋಮವಾರ ಒಂದು ದಿನದ ಉಪವಾಸ - ಅರವಿಂದ್ ಕೇಜ್ರಿವಾಲ್ ಪ್ರತಿಭಟನೆಗೆ ಸಾಥ್

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಪ್ರತಿಭಟನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬೆಂಬಲ ನೀಡಿದ್ದು, ಸೋಮವಾರ ಒಂದು ದಿನದ ಉಪವಾಸ ಮಾಡಲಿದ್ದಾರೆ.

Delhi CM  Arvind Kejriwal
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
author img

By

Published : Dec 13, 2020, 9:01 PM IST

ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸೋಮವಾರ ತಾವು ಒಂದು ದಿನದ ಉಪವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

  • किसानों ने आह्वान किया है कि कल एक दिन का उपवास रखना है। आम आदमी पार्टी इसका पूरा समर्थन करती है। मैं भी कल अपने किसान भाइयों के साथ उपवास रखूँगा। https://t.co/WPyVCf0Vef

    — Arvind Kejriwal (@ArvindKejriwal) December 13, 2020 " class="align-text-top noRightClick twitterSection" data=" ">

ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ನೀಡಿರುವ ಅವರು ಆಮ್ ಆದ್ಮಿ ಪಕ್ಷ ರೈತರ ಪ್ರತಿಭಟನೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಾಳೆ ನನ್ನ ರೈತ ಸಹೋದರರೊಂದಿಗೆ ಉಪವಾಸವನ್ನೂ ಮಾಡುತ್ತೇನೆ ಎಂದು ಹೇಳಿದ್ದಾರೆ.

ಓದಿ: ರೈತರನ್ನು ರಕ್ಷಿಸುವ ಸಲುವಾಗಿಯೇ ಕೃಷಿ ಕಾನೂನುಗಳ ಜಾರಿ: ಕೇಂದ್ರ ಕೃಷಿ ಸಚಿವ

ರೈತರ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿರುವ ಅರವಿಂದ್ ಕೇಜ್ರಿವಾಲ್ ನಾಳೆ ಉಪವಾಸ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರು ನನ್ನ ಜೊತೆಯಾಗಬೇಕು ಎಂದು ಮನವಿ ಮಾಡಿದ್ದಾರೆ.

ಕೇಂದ್ರದ ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸಾವಿರಾರು ಮಂದಿ ಬೆಂಬಲ ಸೂಚಿಸಿದ್ದಾರೆ. ನಾವು ಒಂದು ದಿನ ಉಪವಾಸವಿದ್ದು, ಒಗ್ಗಟ್ಟನ್ನು ಪ್ರದರ್ಶಿಸೋಣ. ಈ ಕೃಷಿ ಕಾಯ್ದೆಗಳು ದೇಶಕ್ಕೆ ಮಾರಕ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.