ನವದೆಹಲಿ: ನೀಟ್ ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬ ಖಂಡಿಸಿ ವೈದ್ಯರು ಕಳೆದ ಒಂದು ತಿಂಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಇದೇ ವಿಚಾರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಈ ವೇಳೆ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರು ಇರಬೇಕಾಗಿರುವುದು ಆಸ್ಪತ್ರೆಗಳಲ್ಲಿ, ಹೊರತಾಗಿ ಬೀದಿಗಳಲ್ಲಿ ಅಲ್ಲ ಎಂದಿರುವ ಕೇಜ್ರಿವಾಲ್, ನೀಟ್-ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆ ತ್ವರಿತಗೊಳಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ವೈದ್ಯರ ಸಮಸ್ಯೆ ಬಗೆಹರಿಸಲು ಪ್ರಧಾನಿ ಖುದ್ದಾಗಿ ಮುಂದಾಗಬೇಕು ಎಂದಿರುವ ಸಿಎಂ ಕೇಜ್ರಿವಾಲ್, ಆದಷ್ಟು ಬೇಗ ಪರಿಹಾರ ಮಾರ್ಗ ಕಂಡುಹಿಡಿಯಬೇಕು ಎಂದಿದ್ದಾರೆ. ಟ್ವಿಟರ್ನಲ್ಲಿ ಪತ್ರದ ಪ್ರತಿ ಹಂಚಿಕೊಂಡಿದ್ದಾರೆ. ವೈದ್ಯರ ಮೇಲಿನ ಪೊಲೀಸರ ದೌರ್ಜನ್ಯವನ್ನ ತಾವು ಖಂಡಿಸುವುದಾಗಿ ತಿಳಿಸಿದ್ದಾರೆ.
-
केंद्र के डॉक्टर कई दिनों से हड़ताल पर हैं। इन्होंने कोरोना में अपनी जान की बाज़ी लगाकर सेवा की। कोरोना फिर बढ़ रहा है। इन्हें अस्पताल में होना चाहिए, ना कि सड़कों पर
— Arvind Kejriwal (@ArvindKejriwal) December 28, 2021 " class="align-text-top noRightClick twitterSection" data="
इन पर जो पुलिस बर्बरता की गई, हम उसकी कड़ी निंदा करते हैं। PM साहिब इनकी माँगे जल्द मानें। PM को मेरा पत्र pic.twitter.com/yE5waHecAz
">केंद्र के डॉक्टर कई दिनों से हड़ताल पर हैं। इन्होंने कोरोना में अपनी जान की बाज़ी लगाकर सेवा की। कोरोना फिर बढ़ रहा है। इन्हें अस्पताल में होना चाहिए, ना कि सड़कों पर
— Arvind Kejriwal (@ArvindKejriwal) December 28, 2021
इन पर जो पुलिस बर्बरता की गई, हम उसकी कड़ी निंदा करते हैं। PM साहिब इनकी माँगे जल्द मानें। PM को मेरा पत्र pic.twitter.com/yE5waHecAzकेंद्र के डॉक्टर कई दिनों से हड़ताल पर हैं। इन्होंने कोरोना में अपनी जान की बाज़ी लगाकर सेवा की। कोरोना फिर बढ़ रहा है। इन्हें अस्पताल में होना चाहिए, ना कि सड़कों पर
— Arvind Kejriwal (@ArvindKejriwal) December 28, 2021
इन पर जो पुलिस बर्बरता की गई, हम उसकी कड़ी निंदा करते हैं। PM साहिब इनकी माँगे जल्द मानें। PM को मेरा पत्र pic.twitter.com/yE5waHecAz
ಇದನ್ನೂ ಓದಿರಿ: ಬಿಹಾರದಲ್ಲಿ ಸಿಲಿಂಡರ್ ಸ್ಫೋಟ.. ಒಂದೇ ಕುಟುಂಬದ ಐವರು ಮಕ್ಕಳು ಸಜೀವದಹನ
ಕೇಂದ್ರದೊಂದಿಗೆ ನಡೆಸಿದ ಸಭೆ ವಿಫಲ..
ಪ್ರತಿಭಟನಾ ನಿರತ ವೈದ್ಯರ ನಿಯೋಗ ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಸಭೆ ನಡೆಸಿದ್ದು, ಅದು ವಿಫಲಗೊಂಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ವೈದ್ಯರು ತಮ್ಮ ಹೋರಾಟ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ.
ನೀಟ್-ಪಿಜಿ 2021 ಕೌನ್ಸೆಲಿಂಗ್ ವಿಳಂಬ ವಿರುದ್ಧ ರೆಸಿಡೆಂಟ್ ವೈದ್ಯರ ಪ್ರತಿಭಟನೆ ಇದೀಗ ಭಾರಿ ಹೈಡ್ರಾಮಕ್ಕೆ ಕಾರಣವಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ವರ್ತನೆಯನ್ನು ವಿರೋಧಿಸಿ ನಾಳೆ ಬೆಳಗ್ಗೆ 8 ಗಂಟೆಯಿಂದ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳನ್ನು ಬಹಿಷ್ಕರಿಸುವುದಾಗಿ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ ಘೋಷಣೆ ಮಾಡಿದೆ.