ನವದೆಹಲಿ: ದೆಹಲಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಇದೇ ಕಾರಣಕ್ಕಾಗಿ ಇದೀಗ ಕೇಜ್ರಿವಾಲ್ ಕೂಡ ಹೋಂ ಕ್ವಾರಂಟೈನ್ಗೊಳಗಾಗಿದ್ದಾರೆ.
2020ರ ಜೂನ್ ತಿಂಗಳಲ್ಲಿ ಕೇಜ್ರಿವಾಲ್ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಅವರು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈಗಾಗಲೇ 2ನೇ ಹಂತದ ಕೋವಿಡ್ ಅಲೆ ಜೋರಾಗಿದ್ದು, ನಿತ್ಯ ಸಾವಿರಾರು ಹೊಸ ಪ್ರಕರಣ ದಾಖಲಾಗುತ್ತಿವೆ. ನಿನ್ನೆಯಷ್ಟೇ 23,686 ಕೋವಿಡ್ ಪ್ರಕರಣ ದಾಖಲಾಗಿದ್ದು, 240 ಜನರು ಸಾವನ್ನಪ್ಪಿದ್ದಾರೆ. ಸದ್ಯ ದೆಹಲಿಯಲ್ಲಿ 8,77,146 ಕೋವಿಡ್ ಪ್ರಕರಣಗಳಿದ್ದು, ಮುಂದಿನ ಆರು ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ.