ನವ ದೆಹಲಿ: ಎಂಸಿಡಿ ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ನ ದೆಹಲಿ ಘಟಕದ ಉಪಾಧ್ಯಕ್ಷ ಅಲಿ ಮೆಹದಿ ಮತ್ತು ಪಕ್ಷದ ಇಬ್ಬರು ಹೊಸದಾಗಿ ಚುನಾಯಿತ ಕೌನ್ಸಿಲರ್‌ಗಳು ಶುಕ್ರವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನೂತನವಾಗಿ ಚುನಾಯಿತ ಕೌನ್ಸಿಲರ್‌ಗಳಾದ ಸಬಿಲಾ ಬೇಗಂ ಮತ್ತು ನಾಜಿಯಾ ಖಾತೂನ್ ಕಾಂಗ್ರೆಸ್ ಸೇರಿದ್ದಾರೆ ಎಂದು ಎಎಪಿ ನಾಯಕ ದುರ್ಗೇಶ್ ಪಾಠಕ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಉತ್ತಮ ಕೆಲಸಗಳನ್ನು ಮೆಚ್ಚಿ ಇವರು ಆಪ್ ಸೇರಲು ನಿರ್ಧರಿಸಿದ್ದಾರೆ ಎಂದು ಹೇಳಿದರು.
ನಾವು ದೆಹಲಿ ಸುಧಾರಣೆಗಾಗಿ ಕೆಲಸ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಆಹ್ವಾನ ನೀಡಿದ್ದೇವೆ. ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಲಿ ಮೆಹದಿ ಮತ್ತು ಕಾಂಗ್ರೆಸ್ನಿಂದ ಹೊಸದಾಗಿ ಆಯ್ಕೆಯಾದ ಇಬ್ಬರು ಕೌನ್ಸಿಲರ್‌ಗಳಾದ ಸಬಿಲಾ ಬೇಗಂ ಮತ್ತು ನಾಜಿಯಾ ಖಾತೂನ್ ಎಎಪಿಗೆ ಸೇರುತ್ತಿದ್ದಾರೆ ಎಂದು ಘೋಷಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಪಾಠಕ್ ಹೇಳಿದರು.
ಮುಸ್ತಫಾಬಾದ್‌ನ ವಾರ್ಡ್ ಸಂಖ್ಯೆ 243 ರಿಂದ ಸಬಿಲಾ ಬೇಗಂ ಮತ್ತು ವಾರ್ಡ್ ಸಂಖ್ಯೆ 245 ಬ್ರಿಜ್ ಪುರಿಯಿಂದ ನಾಜಿಯಾ ಖಾತೂನ್ ಗೆದ್ದಿದ್ದಾರೆ. ಇತ್ತೀಚೆಗೆ ನಡೆದ ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್ ಒಂಬತ್ತು ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಎಂಸಿಡಿ ಚುನಾವಣೆಗೆ ಪಕ್ಷಾಂತರ ವಿರೋಧಿ ಕಾನೂನು ಅನ್ವಯಿಸುವುದಿಲ್ಲ. ತಾವು ತಮ್ಮ ಪ್ರದೇಶದಲ್ಲಿ ಅಭಿವೃದ್ಧಿ ಬಯಸಿದ್ದರಿಂದ ಎಎಪಿ ಸೇರಲು ನಿರ್ಧರಿಸಿದ್ದೇವೆ ಎಂದು ಮೆಹದಿ ಹೇಳಿದರು. ಕೇಜ್ರಿವಾಲ್ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ನಾವು ಎಎಪಿ ಸೇರಲು ನಿರ್ಧರಿಸಿದ್ದೇವೆ. ನಮ್ಮ ಪ್ರದೇಶದಲ್ಲಿ ಅಭಿವೃದ್ಧಿ ಬೇಕು. ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ಪಕ್ಷವು ರಾಜಧಾನಿಯನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿದೆ ಎಂದು ಮೆಹದಿ ಹೇಳಿದರು.
ರಾಷ್ಟ್ರ ರಾಜಧಾನಿ ದೆಹಲಿಯ ಎಂಸಿಡಿ ಚುನಾವಣೆಯಲ್ಲಿ ಆಪ್ ಬಿಜೆಪಿಯಿಂದ ಅಧಿಕಾರ ಕಿತ್ತುಕೊಂಡಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ 250 ವಾರ್ಡ್‌ಗಳಲ್ಲಿ 134 ಗೆದ್ದುಕೊಂಡರೆ, ಬಿಜೆಪಿ 104 ಸ್ಥಾನ ಗೆದ್ದಿದೆ.
ಇದನ್ನೂ ಓದಿ: ಗುಜರಾತ್: ಪ್ರಮುಖ ಪ್ರತಿಪಕ್ಷದ ಸ್ಥಾನಮಾನ ಒಂದೇ ಒಂದು ಸೀಟಿನಿಂದ 'ಕೈ' ತಪ್ಪುವ ಭೀತಿ