ETV Bharat / bharat

ಅಗ್ನಿ ದುರಂತಕ್ಕೆ ಏಳು ಮಂದಿ ದುರ್ಮರಣ.. ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಘೋಷಿಸಿದ ಕೇಜ್ರಿವಾಲ್​

ದೆಹಲಿಯಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಪರಿಹಾರ ಘೋಷಿಸಿದ್ದಾರೆ.

author img

By

Published : Mar 12, 2022, 5:30 PM IST

Delhi fire
Delhi fire

ನವದೆಹಲಿ: ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

  • गोकुलपुरी में आग की घटना बेहद दुखद। घटनास्थल पर पहुँचकर पीड़ितों से मिला, इस हादसे में कई लोगों ने अपने घर और अपनों को खो दिया।

    सरकार मृतकों के परिवारों को 10 लाख रुपए, मृतक बच्चों के परिवार वालों को 5 लाख रुपए और जिनका आशियाना जला है उन्हें 25,000 रुपए देगी। pic.twitter.com/kbUAkmezfN

    — Arvind Kejriwal (@ArvindKejriwal) March 12, 2022 " class="align-text-top noRightClick twitterSection" data=" ">

ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತವಾಗಿದೆ. ಬಡವರು ಬಹಳಷ್ಟು ಕಷ್ಟಪಟ್ಟು ತಮ್ಮ ಜೀವನ ಸಾಗಿಸುತ್ತಾರೆ. ಈ ಘಟನೆಯಿಂದ ನನಗೆ ನೋವಾಗಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಮೃತ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ನೀಡುವುದಾಗಿ ಹೇಳಿರುವ ಸಿಎಂ, ಗುಡಿಸಲು ಸುಟ್ಟು ಹೋಗಿರುವ ಕುಟುಂಬಗಳಿಗೆ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ದೆಹಲಿಯಲ್ಲಿ ಅಗ್ನಿ ದುರಂತ : ಏಳು ಮಂದಿ ದುರ್ಮರಣ

ಪ್ರಧಾನಿ ನರೇಂದ್ರ ಮೋದಿ ಸಂತಾಪ: ಗೋಕುಲಪುರಿ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

  • दिल्ली के गोकुलपुरी में अग्निकांड से हुआ हादसा हृदयविदारक है। इस हादसे में जिन लोगों को अपनी जान गंवानी पड़ी है, उनके परिजनों के प्रति मैं गहरी संवेदना प्रकट करता हूं। ईश्वर उन्हें इस अपार दुख को सहने की शक्ति प्रदान करे।

    — Narendra Modi (@narendramodi) March 12, 2022 " class="align-text-top noRightClick twitterSection" data=" ">

ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಬಡವರು ನಿರ್ಮಿಸಿದ್ದ ಗುಡಿಸಲುಗಳಲ್ಲಿ ನಿನ್ನೆ ತಡರಾತ್ರಿ ದಿಢೀರ್​ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಮಗು ಸೇರಿದಂತೆ ಏಳು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಕಿ ಅವಘಡಕ್ಕೆ ಏನು ಕಾರಣ ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ. ಘಟನೆ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.