ETV Bharat / bharat

ದೆಹಲಿಯಲ್ಲಿ ಲಾಕ್​ಡೌನ್​​ ಮಾಡಲ್ಲ; ಸೋಂಕಿತರಿಗೆ ಆನ್‌ಲೈನ್‌ ಯೋಗ ತರಗತಿ: ಸಿಎಂ ಕೇಜ್ರಿವಾಲ್‌

author img

By

Published : Jan 11, 2022, 3:32 PM IST

ದೆಹಲಿಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಕೇಜ್ರಿವಾಲ್​ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದಿದ್ದಾರೆ.

Chief Minister Arvind Kejriwal
Chief Minister Arvind Kejriwal

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ಜೋರಾಗಿದೆ. ಪ್ರತಿದಿನ ಲಕ್ಷಾಂತರ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್​ ಪ್ರಕರಣಗಳ ಸಂಖ್ಯೆ ಏರುತ್ತಲೇ ಸಾಗಿದೆ. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮಹತ್ವದ ಘೋಷಣೆ ಮಾಡಿದ್ದಾರೆ.

ಲೋಕನಾಯಕ ಜೈಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸಂಬಂಧಿತ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ದೆಹಲಿಯಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದು ತಿಳಿಸಿರುವ ಅವರು, ಮೂರನೇ ಅಲೆ ಎದುರಿಸಲು ಸಜ್ಜಾಗಿದ್ದೇವೆ ಎಂದರು.

  • About 22,000 COVID cases with a positivity rate of 24-25% in the last few days...Don't worry, we will not impose lockdown...At the DDMA meet we requested Central govt officials to cover the entire NCR for restrictions, they assured us on the same: Delhi CM Arvind Kejriwal pic.twitter.com/FlXDAOx05O

    — ANI (@ANI) January 11, 2022 " class="align-text-top noRightClick twitterSection" data=" ">

ದೆಹಲಿಯಲ್ಲಿ ಪ್ರತಿದಿನ 20-22 ಸಾವಿರದಷ್ಟು ಕೋವಿಡ್ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದರ ನಿಯಂತ್ರಣಕ್ಕೆ ನೈಟ್​ ಕರ್ಫ್ಯೂ ಸೇರಿದಂತೆ ಇತರೆ ಮಾರ್ಗಸೂಚಿ ಜಾರಿ ಮಾಡಿರುವ ಬಗ್ಗೆ ಮಾತನಾಡಿದ ಕೇಜ್ರಿವಾಲ್​​, ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡಲ್ಲ ಎಂದರು.

ಇದನ್ನೂ ಓದಿ: ಬಿಜೆಪಿ ತ್ಯಜಿಸಿ ಸಮಾಜವಾದಿ ಪಕ್ಷ ಸೇರಿದ ಯುಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ

ಮೂರನೇ ಅಲೆ ಕೋವಿಡ್ ತಡೆಗಟ್ಟಲು ನಾವು ಎಲ್ಲ ರೀತಿಯಿಂದಲೂ ಸಜ್ಜುಗೊಂಡಿದ್ದು, ಅಗತ್ಯಬಿದ್ದರೆ ಹೆಚ್ಚಿನ ಬೆಡ್​ಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ದೆಹಲಿಯಲ್ಲಿ ಸದ್ಯ ಪಾಸಿಟಿವಿಟಿ ದರ ಶೇ. 24ರಷ್ಟಿದೆ. ಮುಂದೆ ಏನಾಗುತ್ತದೆ ಎಂದು ಕಾದುನೋಡೋಣ ಎಂದಿರುವ ಅವರು, ಜನರ ಉದ್ಯೋಗದ ಮೇಲೆ ಯಾವುದೇ ಪರಿಣಾಮ ಬೀರಲು ನಮಗೆ ಇಷ್ಟವಿಲ್ಲ ಎಂದು ಹೇಳಿದರು.

ಆನ್​ಲೈನ್​ ಯೋಗ ತರಗತಿ

ಕೋವಿಡ್ ಸೋಂಕಿಗೊಳಗಾಗಿ ಹೋಂ ಕ್ವಾರಂಟೈನ್​​ಗೊಳಗಾಗುವ ಜನರಿಗೆ ಆನ್​ಲೈನ್ ಯೋಗ ತರಗತಿ ಪ್ರಾರಂಭಿಸುವುದಾಗಿಯೂ ತಿಳಿಸಿದ್ದಾರೆ. ಪ್ರಾಣಾಯಾಮ ಮತ್ತು ಯೋಗದಿಂದ ರೋಗನಿರೋಧಕ ಶಕ್ತಿ ಹೆಚ್ಚಾಗಲಿದ್ದು, ಅದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.