ನವದೆಹಲಿ: ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ಮಹತ್ವದ ಘೋಷಣೆ ಮಾಡಿದೆ. ಜನವರಿ 1ರಿಂದ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ 450 ವಿವಿಧ ರೀತಿಯ ವೈದ್ಯಕೀಯ ಪರೀಕ್ಷೆಗಳ ಮಾಡಲಾಗುವುದು. ಈ ಕಾರ್ಯಕ್ರಮವು ಖಾಸಗಿ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗದವರಿಗೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಪ್ರಸ್ತುತ ನಗರಾಡಳಿತದಿಂದ ಉಚಿತವಾಗಿ 212 ವೈದ್ಯಕೀಯ ಪರೀಕ್ಷೆಗಳ ಮಾಡಲಾಗುತ್ತಿದೆ. ಇದೀಗ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಇನ್ನೂ 238 ಪರೀಕ್ಷೆಗಳನ್ನು ಉಚಿತವಾಗಿ ಮಾಡುವ ಆರೋಗ್ಯ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಕೇಜ್ರಿವಾಲ್ ಒಪ್ಪಿಗೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Providing good quality health and education to all, irrespective of anyone’s economic status, is our mission. Healthcare has become v expensive. Many people can’t afford pvt healthcare. This step will help all such people https://t.co/2B94b6YPCZ
— Arvind Kejriwal (@ArvindKejriwal) December 13, 2022 " class="align-text-top noRightClick twitterSection" data="
">Providing good quality health and education to all, irrespective of anyone’s economic status, is our mission. Healthcare has become v expensive. Many people can’t afford pvt healthcare. This step will help all such people https://t.co/2B94b6YPCZ
— Arvind Kejriwal (@ArvindKejriwal) December 13, 2022Providing good quality health and education to all, irrespective of anyone’s economic status, is our mission. Healthcare has become v expensive. Many people can’t afford pvt healthcare. This step will help all such people https://t.co/2B94b6YPCZ
— Arvind Kejriwal (@ArvindKejriwal) December 13, 2022
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಸಿಎಂ ಕೇಜ್ರಿವಾಲ್, ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೇ ಎಲ್ಲರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣವನ್ನು ನೀಡುವುದು ತಮ್ಮ ಸರ್ಕಾರದ ಧ್ಯೇಯವಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಆರೋಗ್ಯವು ತುಂಬಾ ದುಬಾರಿಯಾಗಿದೆ. ಅನೇಕ ಜನರು ಖಾಸಗಿ ಆರೋಗ್ಯ ಸೇವೆಯನ್ನು ಪಡೆಯಲು ಸಾಧ್ಯವಿಲ್ಲ. ಈ ಕ್ರಮವು ದೆಹಲಿಯ ಆರ್ಥಿಕ ದುಲರ್ಬರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಕೊಲೆ ಬೆದರಿಕೆ ಕರೆ