ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡ ದೆಹಲಿ ಹೈಕೋರ್ಟ್, ಕಾರುಗಳಲ್ಲಿ ಒಬ್ಬರೇ ಸಂಚರಿಸುತ್ತಿದ್ದರೂ ಮಾಸ್ಕ್ ಕಡ್ಡಾಯ ಎಂದು ಮಹತ್ವದ ಆದೇಶ ನೀಡಿದೆ.
ಮಾಸ್ಕ್ ಕೊರೊನಾ ಸಾಂಕ್ರಾಮಿಕ ರೋಗ ತಡೆಯಲು ರಕ್ಷಣಾತ್ಮಕ ಕವಚವಾಗಿದೆ. ಇದು ಕೊರೊನಾ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಮಾಸ್ಕ್ ಮೇಲಿನ ತಕರಾರು ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನಾಲ್ಕು ಅರ್ಜಿಗಳನ್ನು ಇದೇ ವೇಳೆ ಕೋರ್ಟ್ ರದ್ದುಗೊಳಿಸಿತು. ಒಬ್ಬ ವ್ಯಕ್ತಿಯು ಕಾರಿನಲ್ಲಿ ಕುಳಿತಿದ್ದರೂ ಸಹ ಕಾರು ಸಾರ್ವಜನಿಕ ಸ್ಥಳದಲ್ಲಿರುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ : ದೇಶದಲ್ಲಿ ಮತ್ತೆ ಲಕ್ಷ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ