ETV Bharat / bharat

ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ... ರಾಷ್ಟ್ರ ರಾಜಧಾನಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ - Delhi Moscow Flight SU232 news

ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ದೊರೆತ ನಂತರ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ.

elhi IGI airport on alert  bomb threat on flight from Moscow  Delhi IGI airport on alert after bomb threat  ರಾಷ್ಟ್ರ ರಾಜಧಾನಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್  ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನ  ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ  ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್  ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಸಂಚಲನ
ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
author img

By

Published : Oct 14, 2022, 10:27 AM IST

ನವದೆಹಲಿ: ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ದೊರೆತ ನಂತರ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಸಂಚಲನ ಉಂಟಾಗಿತ್ತು. ವಿಮಾನ ಲ್ಯಾಂಡಿಂಗ್‌ನಿಂದ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಏಜೆನ್ಸಿಗಳು ಮುಂಜಾಗ್ರತಾ ಕ್ರಮವಾಗಿ ಅಲರ್ಟ್ ಆದವು. ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.

ಇಂದು ಬೆಳಿಗ್ಗೆ ರಷ್ಯಾದ ರಾಜಧಾನಿ ಮಾಸ್ಕೋದಿಂದ ದೆಹಲಿಗೆ ಹೊರಟಿದ್ದ ಅಂತಾರಾಷ್ಟ್ರೀಯ ವಿಮಾನಕ್ಕೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಾಂಬ್ ಬೆದರಿಕೆ ಇಮೇಲ್ ಸ್ವೀಕರಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 3:20 ಕ್ಕೆ T3 ಗೆ ಆಗಮಿಸುವ SU 232 (ಮಾಸ್ಕೋದಿಂದ ದೆಹಲಿ) ವಿಮಾನದಲ್ಲಿ ಬಾಂಬ್ ಇದೆ ಎಂದು ಇಮೇಲ್‌ನಲ್ಲಿ ಬೆದರಿಕೆ ಸಂದೇಶ ಬಂದಿದೆ. ಇದರ ನಂತರ ಬಾಂಬ್ ನಿಷ್ಕ್ರಿಯ ದಳ ಮತ್ತು ಇತರ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ವಿಮಾನವನ್ನು ರನ್‌ವೇ 29 ರಲ್ಲಿ ಇಳಿಸಲಾಯಿತು. 386 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ಅಧಿಕಾರಿಗಳ ಪ್ರಕಾರ, ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಮತ್ತು ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ವಿಮಾನವನ್ನು ಪ್ರತ್ಯೇಕವಾಗಿ ನಿಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಜೂನ್ 14, 2021 ರಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾರೋ ಒಬ್ಬರು ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಪಾಟ್ನಾಗೆ ಹೋಗುವ SG 8721 ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ತಿಳಿಸಿದಾಗ ಆತಂಕ ಉಂಟಾಗಿತ್ತು. ಸುದ್ದಿ ತಿಳಿದ ತಕ್ಷಣ ಇಡೀ ವಿಮಾನ ನಿಲ್ದಾಣದಲ್ಲಿ ಸಂಚಲನ ಉಂಟಾಗಿತ್ತು. ವಿಷಯದ ಗಂಭೀರತೆಯ ದೃಷ್ಟಿಯಿಂದ ದೆಹಲಿ ಪೊಲೀಸ್ ಅಧಿಕಾರಿಗಳು ಮತ್ತು ಎಲ್ಲಾ ಭದ್ರತಾ ಏಜೆನ್ಸಿಗಳು ತರಾತುರಿಯಲ್ಲಿ ವಿಮಾನವನ್ನು ತಲುಪಿದ್ದರು. ಇಡೀ ವಿಮಾನವನ್ನು ಶೋಧಿಸಲಾಗಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಆಕಾಶದೀಪ್ (22) ಎಂಬಾತ ಬಾಂಬ್ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಬಳಿಕ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದರು.

ಓದಿ: ಹುಬ್ಬಳ್ಳಿಯಿಂದ ದೆಹಲಿಗೆ ನವೆಂಬರ್​14 ರಿಂದ ನೇರ ವಿಮಾನ ಸೇವೆ : ಪ್ರಹ್ಲಾದ್ ಜೋಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.