ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಹಾಗೆ ಈಗ ಆರೋಪಿ ಬಾಲಕಿ ಬಾಯಿಗೆ ಆ್ಯಸಿಡ್ ಹಾಕಲು ಮುಂದಾಗಿದ್ದಾನೆ. ಜುಲೈ 2 ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯನ್ನು ನವದೆಹಲಿಯ ಏಮ್ಸ್ಗೆ ದಾಖಲಿಸಲಾಗಿದೆ. ಸದ್ಯ ಸಂತ್ರಸ್ತೆಯ ದೈಹಿಕ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.
ಆರೋಪಿಯನ್ನು ಜೈ ಪ್ರಕಾಶ್ ಎಂದು ಗುರುತಿಸಲಾಗಿದ್ದು, ಈ ಪ್ರದೇಶದಲ್ಲಿ ಶೂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಜುಲೈ 2 ರಂದು ಸಂತ್ರಸ್ತೆಗೆ ಆಮಿಷವೊಡ್ಡಿ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಅತನ ಪತ್ನಿಯ ಸಹಾಯದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನಂತೆ. ಈ ಬಗ್ಗೆ ಡಿಸಿಪಿ ಸಮೀರ್ ಶರ್ಮಾ ಮಾಹಿತಿ ನೀಡಿದ್ದಾರೆ.
ಜುಲೈ 2 ರಂದು ಅತ್ಯಾಚಾರ ನಡೆದಿದ್ದು, ಜುಲೈ 5 ರಂದು ಸಂತ್ರಸ್ತೆಯ ಬಾಯಿಗೆ ಆ್ಯಸಿಡ್ ಹಾಕಲು ಆರೋಪಿ ಮುಂದಾಗಿದ್ದಾನೆ. ಘಟನೆ ಸಂಬಂಧ ಜೈ ಪ್ರಕಾಶ್ನನ್ನು ಬಂಧಿಸಲಾಗಿದ್ದು, ಆತನ ಪತ್ನಿ ತಲೆಮರೆಸಿಕೊಂಡಿದ್ದಾಳೆ.
ಜುಲೈ 15 ರಂದು ಸಂತ್ರಸ್ತೆಯ ಸಹೋದರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಕ್ರೈಂ ಧಾರಾವಾಹಿಯಿಂದ ಪ್ರೇರಣೆ: ಬಾಲಕನ ಕಿಡ್ನಾಪ್ ಮಾಡಿ ಕೊಲೆಗೈದ 10ನೇ ಕ್ಲಾಸ್ ವಿದ್ಯಾರ್ಥಿಗಳು!