ದೆಹಲಿ : ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲೂ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್ಡೌನ್ ಘೋಷಿಸಲಾಗಿದೆ. ಪರಿಣಾಮ ವಲಸೆ ಕಾರ್ಮಿಕರು ಮತ್ತೆ ತಮ್ಮ ಊರಿನತ್ತ ಮುಖ ಮಾಡಿದ್ದಾರೆ.
ಕಳೆದ ವರ್ಷಕ್ಕಿಂತ ಈ ಬಾರಿ ಕೊರೊನಾ ಪರಿಸ್ಥಿತಿ ಹೆಚ್ಚು ಗಂಭೀರವಾಗಿದೆ. ರಾಜ್ಯದಲ್ಲೂ ಕಠಿಣ ಕರ್ಫ್ಯೂ ಜಾರಿಗೊಳಿಸಲಾಗಿದೆ. ವಲಸೆ ಕಾರ್ಮಿಕರು ಮತ್ತೆ ಲಾಕ್ಡೌನ್ ಭೀತಿ ಹಿನ್ನೆಲೆ ಊರು ಬಿಟ್ಟು ತಮ್ಮೂರಿಗೆ ಪ್ರಯಾಣ ಬೆಳೆಸಲು ಶುರು ಮಾಡಿದ್ದಾರೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದು, ತಮ್ಮ ಊರಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ.