ನವದೆಹಲಿ: ಕಳೆದ ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಮೂರು ತಿಂಗಳ ಕಂದಮ್ಮವೊಂದು ಬಲಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹೈದರ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಕಳೆದ ಕೆಲ ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಗಂಡ-ಹೆಂಡತಿ ಮೂರು ತಿಂಗಳ ಹಿಂದೆ ಮುಂದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಮೇಲಿಂದ ಮೇಲೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಗ್ತಿತ್ತು. ಗುರುವಾರ ಸಹ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಪತಿ ಸಂಚಿತ್ ಕೆಲಸಕ್ಕೆಂದು ಹೊರಗಡೆ ಹೋಗಿದ್ದಾನೆ. ಇದೇ ಸಂದರ್ಭದಲ್ಲಿ ಪತ್ನಿ ತನ್ನ ಮೂರು ತಿಂಗಳ ಮಗುವಿನ ಕೊಲೆ ಮಾಡಿದ್ದಾಳೆ.
ಇದನ್ನೂ ಓದಿ: ತಾಯಿಯನ್ನೇ ಗೃಹಬಂಧನದಲ್ಲಿಟ್ಟ ಮಕ್ಕಳು; 22 ವರ್ಷ ಬೆಳಕನ್ನೇ ನೋಡದ ಮಹಿಳೆ!
ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ, ಈಗಾಗಲೇ ಅಂತ್ಯಕ್ರಿಯೆ ನಡೆಸಲಾಗಿದ್ದು, ಗಂಡ-ಹೆಂಡತಿಯನ್ನ ವಶಕ್ಕೆ ಪಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಪತಿ ಬಡಗಿಯಾಗಿದ್ದು, ಕಳೆದ ಕೆಲ ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ಮೇಲಿಂದ ಮೇಲೆ ಜಗಳ ಮಾಡ್ತಿದ್ದ ಕಾರಣ ಮನೆ ಖಾಲಿ ಮಾಡುವಂತೆ ಮಾಲೀಕರು ಸೂಚನೆ ಸಹ ನೀಡಿದ್ದರು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.