ನವದೆಹಲಿ: ರಕ್ಷಣಾ ನೆಲೆಗಳ ಸ್ಥಾಪನೆಗಳ ಕುರಿತು ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಗಂಭೀರ ಆರೋಪದಡಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯೊಬ್ಬರನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಐಎಎಫ್ ಅಧಿಕಾರಿಯನ್ನು ಮೇ 6 ರಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧನಕ್ಕೊಳಗಾಗಿರುವ ಅಧಿಕಾರಿ ಮಹಿಳೆಯೊಬ್ಬರಿಂದ ಹನಿ-ಟ್ರ್ಯಾಪ್ಗೆ ಒಳಗಾಗಿದ್ದು, ಆಕೆಯೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಬಂಧಿತ ಸಾರ್ಜೆಂಟ್ ಅನ್ನು ಕಾನ್ಪುರದ ದೇವೇಂದ್ರ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು ನವದೆಹಲಿಯ ಸುಬೊರೊಟೊ ಪಾರ್ಕ್‌ನಲ್ಲಿರುವ ಏರ್ಫೋರ್ಸ್ ರೆಕಾರ್ಡ್ ಆಫೀಸ್ನಲ್ಲಿ ಆಡಳಿತ ಸಹಾಯಕರಾಗಿ (ಜಿಡಿ) ಕೆಲಸ ಮಾಡುತ್ತಿದ್ದರು.
ಆರೋಪಿ ಶರ್ಮಾ ವಿರುದ್ಧ ಅಧಿಕೃತ ರಹಸ್ಯ ಕಾಯಿದೆ (OSA) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ಸಮಯದಲ್ಲಿ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಸೇರಿದಂತೆ ಮತ್ತಿತರ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಶರ್ಮಾ ಅವರೊಂದಿಗೆ ಸಂಪರ್ಕದಲ್ಲಿದ್ದ ಇತರೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಲಂಚ ಪಡೆಯವಾಗ ಎಸಿಬಿ ಬಲೆಗೆ ಬಿದ್ದ ಪಾಲಿಕೆ ಜೂನಿಯರ್ ಇಂಜಿನಿಯರ್