ನವದೆಹಲಿ(ಭಾರತ): ಗಣರಾಜ್ಯೋತ್ಸವ ಸಂಭ್ರಮಾಚರಣೆಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳನ್ನು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಪರಿಶೀಲಿಸಿದ್ದಾರೆ.
ಪೊಲೀಸ್ ಕಮಿಷನರ್, ಭಯೋತ್ಪಾದನಾ ವಿರೋಧಿ ಕ್ರಮಗಳ ಜೊತೆಗೆ ಎನ್‌ಡಿಪಿಎಸ್ ಪ್ರಕರಣಗಳು, ಕಳ್ಳತನ, ಅಬಕಾರಿ ಕಾಯ್ದೆ ಮತ್ತು ಜೂಜಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದ್ದಾರೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಲ್ಲದೆ "ಪೋಕ್ಸೊ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಅಡಿಯಲ್ಲಿ ಬಾಕಿ ಇರುವ ಪ್ರಕರಣಗಳನ್ನೂ ಪರಿಶೀಲಿಸಿದ್ದಾರೆ". ಹಿರಿಯ ಅಧಿಕಾರಿಗಳ ಕಣ್ಗಾವಲಿನಲ್ಲಿರುವ ಪಟ್ಟಿಮಾಡಿದ ಅಪರಾಧಿಗಳ ವಿರುದ್ಧ ಜೈಲು, ಜಾಮೀನು, ಪೆರೋಲ್, ಬಿಡುಗಡೆಯಾದ ಅಪರಾಧಿಗಳು ವಿರುದ್ಧ ಪ್ರಸ್ತಾವಿತ ಕ್ರಮಗಳನ್ನು ಪರಿಶೀಲಿಸಿದ್ದಾರೆ.
ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಶೇಷ ಪೊಲೀಸ್, ಕಾನೂನು ಮತ್ತು ಸುವ್ಯವಸ್ಥೆ (ದಕ್ಷಿಣ, ಪಶ್ಚಿಮ ಮತ್ತು ಮಧ್ಯ) ಮತ್ತು ಗುಪ್ತಚರ ಅಧಿಕಾರಿಗಳು ಭಾಗವಹಿಸಿದ್ದರು.