ETV Bharat / bharat

ಸಂಸದೆ ನವನೀತ್ ರಾಣಾಗೆ ಜೀವ ಬೆದರಿಕೆ ಕರೆ: ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು - ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ಮಾತೋಶ್ರೀ - ಹನುಮಾನ್ ಚಾಲೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮುಂಬೈ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿರುವ ಲೋಕಸಭೆ ಸಂಸದೆ ನವನೀತ್ ರಾಣಾ ಅವರು ತಮಗೆ ಜೀವ ಬೆದರಿಕೆ ಕರೆ ಬಂದಿವೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Delhi Police Lodges FIR Day After MP Navneet Rana Alleges of getting Threat Calls
ಸಂಸದೆ ನವನೀತ್ ರಾಣಾಗೆ ಜೀವ ಬೆದರಿಕೆ ಕರೆ
author img

By

Published : May 26, 2022, 8:19 PM IST

ನವದೆಹಲಿ: ಹನುಮಾನ್ ಚಾಲೀಸಾ ಪಠಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮುಂಬೈ ನ್ಯಾಯಾಲಯದಿಂದ ಜಾಮೀನು ಪಡೆದಿರುವ ಸ್ವತಂತ್ರ ಲೋಕಸಭಾ ಸಂಸದೆ ನವನೀತ್ ರಾಣಾ ಅವರು, ತಮಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ, ಭಾರತೀಯ ದಂಡ ಸಂಹಿತೆ ಪ್ರಕಾರ ಸೆಕ್ಷನ್ 506 ಮತ್ತು 509ರ ಅಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತೆ ಅಮೃತಾ ಗುಗುಲೋತ್ ಹೇಳಿದ್ದಾರೆ. ನವನೀತ್ ರಾಣಾ ಬುಧವಾರ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ಸಂಜೆ 5.27 ರಿಂದ 5.47 ರ ಸಮಯದಲ್ಲಿ ಅವರ ವೈಯಕ್ತಿಕ ಮೊಬೈಲ್ ಸಂಖ್ಯೆಗೆ 11 ಕರೆಗಳು ಬಂದಿವೆ. ಅಷ್ಟೇ ಅಲ್ಲದೇ ಆ ವ್ಯಕ್ತಿ ಅವರೊಂದಿಗೆ ಅತ್ಯಂತ ಅನುಚಿತವಾಗಿ ಮಾತನಾಡಿ, ನಿಂದಿಸಿದ್ದಾನೆ ಮತ್ತು ಮಹಾರಾಷ್ಟ್ರಕ್ಕೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಗೋಧಿ, ಸಕ್ಕರೆ ರಫ್ತು ನಿರ್ಬಂಧ ಬಳಿಕ ಅಕ್ಕಿಗೂ ಕಡಿವಾಣ?.. ಶೀಘ್ರದಲ್ಲೇ ಕೇಂದ್ರ ಸರ್ಕಾರ ನಿರ್ಣಯ ಸಾಧ್ಯತೆ

ಏಪ್ರಿಲ್‌ನಲ್ಲಿ, ನವನೀತ್ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಮುಂಬೈನಲ್ಲಿರುವ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಎದುರು ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಘೋಷಿಸಿದ್ದರು.

ಏಪ್ರಿಲ್ 23 ರಂದು, ಮಾತೋಶ್ರೀಯ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಬೇಕೆಂದು ಅವರು ಬಂದಾಗ ದೇಶದ್ರೋಹ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಅವರನ್ನು ಮುಂಬೈ ಪೊಲೀಸರು ಬಂಧಿಸಿದರು. ಮೇ. 4 ರಂದು ಮುಂಬೈ ನ್ಯಾಯಾಲಯವು ಪ್ರಕರಣದಲ್ಲಿ ಇಬ್ಬರಿಗೂ ಜಾಮೀನು ನೀಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.