ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ನಗರದ 9 ಕ್ರೀಡಾಂಗಣಗಳನ್ನು ತಾತ್ಕಾಲಿಕ ಕಾರಾಗೃಹಗಳಾಗಿ ಪರಿವರ್ತಿಸಲು ಅನುಮತಿ ನೀಡುವಂತೆ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.
ಪಂಜಾಬ್, ಹರಿಯಾಣದ ಸಾವಿರಾರು ರೈತರ 'ದೆಹಲಿ ಚಲೋ' ಪ್ರತಿಭಟನೆ ಮುಂದುವರೆದಿದೆ. ಪರಿಸ್ಥಿತಿ ಮತ್ತಷ್ಟು ಉಲ್ಭಣವಾಗಲಿದ್ದು, ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇರುವುದರಿಂದ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ರಾಷ್ಟ್ರ ರಾಜಧಾನಿಗೆ ಬಂದ ಪಂಜಾಬ್ ರೈತರನ್ನು ಬೆಂಬಲಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಶಾಂತಿಯುತ ಪ್ರತಿಭಟನೆ ನಡೆಸುವುದು ಸಾಂವಿಧಾನಿಕ ಹಕ್ಕು. ಪ್ರತಿಭಟನಾಕಾರರ ಮೇಲೆ ಜಲ ಫಿರಂಗಿಗಳನ್ನು ಬಳಸುವುದು ಅಪರಾಧ ಎಂದು ನಿನ್ನೆ ಹೇಳಿದ್ದರು.