ನವದೆಹಲಿ: ಕೋವಿಡ್-19 ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ, ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಘೋಷಿಸಲಾಗುವುದು ಎಂದು ನವದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ. ದೆಹಲಿಯಲ್ಲಿ 37,000 ಬೆಡ್ಗಳ ಸೌಲಭ್ಯ ಹೊಂದಿರುವ ಆಸ್ಪತ್ರೆಯನ್ನು ನಿರ್ಮಿಸಲಿದ್ದೇವೆ ಎಂದು ಅವರು ಇದೇ ವೇಳೆ ಹೇಳಿದರು.
ನಿನ್ನೆ ದೆಹಲಿಯಲ್ಲಿ 61 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಎರಡು ಸಾವು ಸಂಭವಿಸಿತ್ತು. ಈ ಮೂಲಕ ದೆಹಲಿಯಲ್ಲಿ ಪಾಸಿಟಿವಿಟಿ ದರವು ಶೇಕಡಾ 0.08 ರಷ್ಟಿದೆ. ಎರಡನೇ ಅಲೆಯ ಸಂದರ್ಭದ ಅನುಭವಗಳಿಂದ ದೆಹಲಿ ನಗರಾಡಳಿತವು ಈ ಮುನ್ನೆಚ್ಚರಿಕೆ ಕೈಗೊಂಡಿದೆ. ಹೆಚ್ಚು ಆಮ್ಲಜನಕ ಘಟಕಗಳು, ಐಸಿಯು ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ತಡೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆರೋಗ್ಯ ಮೂಲಸೌಕರ್ಯವನ್ನು ಅಭೂತಪೂರ್ವ ಮಟ್ಟಕ್ಕೆ ಹೆಚ್ಚಿಸಲಾಗಿದೆ. 37,000ಕ್ಕಿಂತ ಹೆಚ್ಚು ಬೆಡ್ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.