ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ 448 ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 18,043 ಪ್ರಕರಣಗಳು ದಾಖಲಾಗಿವೆ. ಕೋವಿಡ್ ಹಬ್ಬಲು ಶುರುವಾದ ಬಳಿಕ ಇದೇ ಮೊದಲ ಬಾರಿಗೆ ಗರಿಷ್ಠ ಸಾವು ಸಂಭವಿಸಿದೆ.
ಸರ್ಕಾರದ ಮಾಹಿತಿ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಸದ್ಯ 89,592 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 12.12 ಲಕ್ಷ ಆಗಿದೆ. ಕಳೆದ 24 ಗಂಟೆಯಲ್ಲಿ 51,185 ಆರ್ಟಿಪಿಸಿಆರ್, ಸಿಬಿಎನ್ಎಟಿ, ಟ್ರೂ ನ್ಯಾಟ್ ಪರೀಕ್ಷೆಗಳು ಮತ್ತು 9,860 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. 29.56 ಇದೆ.
ಇದನ್ನೂ ಓದಿ: ತೆಲಂಗಾಣದಲ್ಲಿ 6 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು, 59 ಸಾವು
ಆರೋಗ್ಯ ಇಲಾಖೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,611 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದವರೆಗೆ 33.04 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ 25.93 ಲಕ್ಷ ಜನರು ಮೊದಲ ಡೋಸ್ ಪಡೆದಿದ್ದರೆ, 7.11 ಲಕ್ಷ ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಸೋಮವಾರದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಪ್ರಾರಂಭವಾಗಿದೆ.