ETV Bharat / bharat

ಸ್ನೇಹಿತನ ಮಗಳ ಮೇಲೆ ಅತ್ಯಾಚಾರ; ದೆಹಲಿ ಸರ್ಕಾರಿ ಅಧಿಕಾರಿಯ ವಿರುದ್ಧ ಪೋಕ್ಸೊ, ಪತ್ನಿಯೂ ಆರೋಪಿ - etv bharat kannada

Delhi Student Rape: 12ನೇ ತರಗತಿಯ ವಿದ್ಯಾರ್ಥಿನಿಯೋರ್ವಳ ಮೇಲೆ ಸತತವಾಗಿ ಅತ್ಯಾಚಾರಗೈದ ಆರೋಪದ ಮೇಲೆ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬನ ವಿರುದ್ಧ ಪೋಕ್ಸೊ ಕೇಸ್​ ದಾಖಲಾಗಿದೆ.

Delhi govt officer 'rapes' class XII girl student

author img

By

Published : Aug 20, 2023, 4:29 PM IST

ನವದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ 12 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸತತವಾಗಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ತನ್ನ ಹೆಂಡತಿಯ ಸಹಾಯದಿಂದ 2020 ಮತ್ತು 2021 ರ ನಡುವೆ ತಿಂಗಳುಗಳ ಕಾಲ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

"ಆರೋಪಿ ಅಧಿಕಾರಿಯ ಪತ್ನಿ ಕೂಡ ಈ ಕೃತ್ಯದಲ್ಲಿ ಸಹಾಯ ಮಾಡಿದ್ದರಿಂದ ಮತ್ತು ಈ ವಿಷಯವನ್ನು ಪೊಲೀಸರಿಗೆ ತಿಳಿಸದ ಕಾರಣ, ನಾವು ಅವರ ಹೆಂಡತಿಯ ವಿರುದ್ಧ ಎಫ್ಐಆರ್​ನಲ್ಲಿ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಅನ್ನು ಸೇರಿಸಿದ್ದೇವೆ" ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಸಂತ್ರಸ್ತೆ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಮೊದಲಿಗೆ ಚರ್ಚ್​ ಒಂದರಲ್ಲಿ ಆರೋಪಿಯನ್ನು ಭೇಟಿಯಾಗಿದ್ದಳು.

ವಿದ್ಯಾರ್ಥಿನಿಗೆ ಸಹಾಯ ಮಾಡುವ ನೆಪದಲ್ಲಿ ಆರೋಪಿಯು ಆಕೆಯನ್ನು ತನ್ನ ಮನೆಗೆ ಕರೆದೊಯ್ಯುತ್ತಿದ್ದ. ಆದರೆ ಆರೋಪಿ ಕೆಲ ದಿನಗಳ ನಂತರ ಆಕೆಯಿಂದ ದೂರವಾದ ನಂತರ ಸಂತ್ರಸ್ತ ಬಾಲಕಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದಳು.

ಅತ್ಯಾಚಾರದಿಂದ ಬಾಲಕಿಯು ಗರ್ಭಿಣಿಯಾದಾಗ ಆರೋಪಿಗಳು ಆಕೆಗೆ ಬೆದರಿಕೆ ಒಡ್ಡಿದ್ದರು. ಅಲ್ಲದೆ ತೀರಾ ಆಘಾತಕಾರಿ ವಿಷಯವೆಂದರೆ, ಸಂತ್ರಸ್ತೆ ತನ್ನ ಮೇಲಾದ ಘಟನೆಯನ್ನು ಆರೋಪಿಯ ಪತ್ನಿಗೆ ತಿಳಿಸಿದಾಗ ಆಕೆ ಸಹಾಯ ಮಾಡುವುದರ ಬದಲು ಮಾತ್ರೆ ನೀಡಿ ಬಾಲಕಿಯ ಗರ್ಭಪಾತ ಮಾಡಿಸಿದ್ದಳು. ಅಲ್ಲದೆ ಸ್ವತಃ ತನ್ನ ಮಗನನ್ನು ಕಳುಹಿಸಿ ಗರ್ಭಪಾತದ ಮಾತ್ರೆ ತರಿಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿದ್ದಾರೆ. ಬಾಲಕಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಪೊಲೀಸರು ಅವಳ ಹೇಳಿಕೆಯನ್ನು ದಾಖಲಿಸಲು ಸ್ಥಳೀಯ ಮ್ಯಾಜಿಸ್ಟ್ರೇಟ್ ಬಳಿಗೆ ಕರೆದೊಯ್ಯಲಿದ್ದಾರೆ. ಆರೋಪಿ ಮತ್ತು ಆತನ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 376 (2) (ಎಫ್), 506, 509, 323, 313, 120 ಬಿ ಮತ್ತು 34 ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 6/21 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್​: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದಕ್ಕಾಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2019 ರ ಅಡಿಯಲ್ಲಿ ಬೀದರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ಈ ವರ್ಷದ ಮಾರ್ಚ್ 29 ರಂದು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದ. ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ)ಯು ಶಿಕ್ಷಕನ ಮದುವೆಯ ಬಗ್ಗೆ ವಿಚಾರಿಸುವಂತೆ ಸಂಬಂಧಪಟ್ಟ ಬ್ಲಾಕ್ ಶಿಕ್ಷಣ ಅಧಿಕಾರಿಗೆ (ಬಿಇಒ) ನಿರ್ದೇಶನ ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಬೆಳಗಾವಿ: ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.