ETV Bharat / bharat

ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ

author img

By

Published : Jan 2, 2021, 6:23 AM IST

Updated : Jan 2, 2021, 6:29 AM IST

ರಾಷ್ಟ್ರ ರಾಜಧಾನಿ ನವದೆಹಲಿಯ ಕಂಜಾವ್ಲಾ ಪ್ರದೇಶದಲ್ಲಿ ಸಂಚಾರ ಪೊಲೀಸ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು 30 ವರ್ಷದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.

delhi traffic police constable hanged himself
ನೇಣುದ ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೆಬಲ್ ಆತ್ಮಹತ್ಯೆ

ನವದೆಹಲಿ: ಕಾಂಜಾವ್ಲಾ ಪ್ರದೇಶದಲ್ಲಿ ಸಂಚಾರ ಪೊಲೀಸ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

ಮೃತ ವ್ಯಕ್ತಿಯನ್ನು 30 ವರ್ಷದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಪತ್ರವನ್ನು ಸ್ವೀಕರಿಸದ ಕಾರಣ, ಆತ್ಮಹತ್ಯೆಗೆ ಕಾರಣಗಳ ಬಗ್ಗೆ ಮಾಹಿತಿ ಗೊತ್ತಾಗಿಲ್ಲ.

ಝಜ್ಜರ್‌ನ ಚಂದೋಲ್ ಗ್ರಾಮದ ನಿವಾಸಿ ಅನಿಲ್ 2010 ರಲ್ಲಿ ದೆಹಲಿ ಕಾನ್‌ಸ್ಟೇಬಲ್ ಆಗಿ ನೇಮಕಗೊಂಡಿದ್ದರು. ಪ್ರಸ್ತುತ ಅವರನ್ನು ಜನಕ್ಪುರಿ ಸಂಚಾರ ವಲಯದಲ್ಲಿ ಪೋಸ್ಟ್ ಮಾಡಲಾಗಿದೆ. ಅನಿಲ್ ಅವರು ಆರೇಳು ತಿಂಗಳಿಂದ ಘೆವ್ರಾ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಮೃತನ ತಂದೆ ಹೇಳಿದ್ದಾರೆ. ದೂರವಾಣಿ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ತಮ್ಮ ಮಗನ ಮನೆಗೆ ತಲುಪಿದ್ದಾರೆ.

ಈ ಸಮಯದಲ್ಲಿ, ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಕಂಡು ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಾಗಿಲು ಮುರಿದು ಒಳ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ದೇಹದ ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಕೊಂಡಿದ್ದಾರೆ.

Last Updated : Jan 2, 2021, 6:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.