ನವದೆಹಲಿ : ದೆಹಲಿಯ ಯಮುನಾ ನದಿಯಲ್ಲಿ ನೀರಿನ ಮಟ್ಟವು ಏರಿದ್ದು ಇಂದು ಬೆಳಗ್ಗೆವರೆಗೆ 205.30 ಮೀಟರ್ ದಾಖಲಾಗಿದೆ. ದೆಹಲಿ ಮತ್ತು ನದಿಯ ಬದಿಯ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಯಮುನಾ ಪ್ರವಾಹ ಪ್ರದೇಶದಲ್ಲಿ ವಾಸಿಸುತ್ತಿರುವ 100ಕ್ಕೂ ಹೆಚ್ಚು ಕುಟುಂಬಗಳನ್ನು ಕಳೆದ ಕೆಲವು ದಿನಗಳಿಂದ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನು, ದೆಹಲಿ ಆಡಳಿತವು ಪ್ರವಾಹದ ಎಚ್ಚರಿಕೆ ನೀಡಿದೆ. ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ.
![100 ಕುಟುಂಬಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ](https://etvbharatimages.akamaized.net/etvbharat/prod-images/12620894_yamuna.jpg)
ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ : ಜನ ಜೀವನ ಅಸ್ತವ್ಯಸ್ತ
ರಾಜಧಾನಿಯಲ್ಲಿನ ನದಿಯು 205.33 ಮೀಟರ್ಗಳಷ್ಟು ಅಪಾಯದ ಮಟ್ಟವನ್ನೂ ಮೀರಿ ಮೇಲ್ಭಾಗದ ಪ್ರದೇಶಗಳಲ್ಲಿ ಜಲಾವೃತವಾಗಿದೆ. ಪ್ರವಾಹದ ಹಿನ್ನೆಲೆ ನಾವು ವಿವಿಧ ಪ್ರದೇಶಗಳಲ್ಲಿ ದೋಣಿಗಳನ್ನು ನಿಯೋಜಿಸಿದ್ದೇವೆ ಮತ್ತು ದುರ್ಬಲ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳನ್ನು ತಾತ್ಕಾಲಿಕವಾಗಿ ನಗರದಲ್ಲಿರುವ ಸರ್ಕಾರದ ಟೆಂಟ್‌ಗಳು ಮತ್ತು ಆಶ್ರಯ ಮನೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.