ETV Bharat / bharat

ಪಾಕ್​ನಲ್ಲಿ ಇಬ್ಬರು ಸಿಖ್​ ಪ್ರಜೆಗಳ ಹತ್ಯೆ: ಭಾರತದಿಂದ ಖಂಡನೆ - latest news on sikh killing in pakistan

ನಾವು ಪಾಕಿಸ್ತಾನ ಸರ್ಕಾರಕ್ಕೆ ಈ ಬಗ್ಗೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದ್ದೇವೆ. ನಾವು ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಮತ್ತು ಈ ಶೋಚನೀಯ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪಾಕ್​ನಲ್ಲಿ ಸಿಖ್​ ಪ್ರಜೆಗಳ ಹತ್ಯೆ
ಪಾಕ್​ನಲ್ಲಿ ಸಿಖ್​ ಪ್ರಜೆಗಳ ಹತ್ಯೆ
author img

By

Published : May 15, 2022, 9:39 PM IST

ನವದೆಹಲಿ: ಪಾಕಿಸ್ತಾನದಲ್ಲಿ ಸಿಖ್ ಸಮುದಾಯದ ನಾಗರೀಕರ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದು ಆಘಾತಕಾರಿ ಮತ್ತು ಶೋಚನೀಯ ಸಂಗತಿ ಎಂದು ಕರೆದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಕಿಸ್ತಾನ ಸರ್ಕಾರದ ಬಗ್ಗೆ ಅಸಮಧಾನಗೊಂಡಿದ್ದು, ಹತ್ಯೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಪ್ರಕ್ಷುಬ್ಧ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ ಭಾನುವಾರ ಇಬ್ಬರು ಸಿಖ್ ಉದ್ಯಮಿಗಳನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಸಲ್ಜೀತ್ ಸಿಂಗ್(42) ಹಾಗೂ ರಂಜೀತ್ ಸಿಂಗ್(38) ರನ್ನು ಬೆಳಗ್ಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾಳಿ ಮಾಡಿ ಸ್ಥಳದಲ್ಲೇ ಕೊಂದಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ನಾವು ಪಾಕಿಸ್ತಾನ ಸರ್ಕಾರದೊಂದಿಗೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದ್ದೇವೆ. ನಾವು ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಮತ್ತು ಈ ಶೋಚನೀಯ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ನೀಡುತ್ತೇವೆ. ಪಾಕಿಸ್ತಾನ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತದೆ, ಅಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ನೋಡಿಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಪಾಕ್​ನಲ್ಲಿ ಸಿಖ್​ ಪ್ರಜೆಗಳ ಹತ್ಯೆ
ಪಾಕ್​ನಲ್ಲಿ ಸಿಖ್​ ಪ್ರಜೆಗಳ ಹತ್ಯೆ ಖಂಡಿಸಿ ಸಮುದಾಯದಿಂದ ಪ್ರತಿಭಟನೆ

ಹತ್ಯೆಗೀಡಾ ಈ ಇಬ್ಬರು ಸಿಖ್ಖರು ಮಸಾಲೆ ವ್ಯಾಪಾರ ಮಾಡಿಕೊಂಡಿದ್ದರು ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಈ ಹತ್ಯೆಯ ಹೊಣೆಯನ್ನು ಇದುವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಈ ಕೊಲೆಯನ್ನು ಖಂಡಿಸಿ ಪಾಕಿಸ್ತಾನದ ಪೇಶಾವರದಲ್ಲಿ ಸಿಖ್​ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಬಂಧಿಸಿ ಸರಿಯಾದ ಶಿಕ್ಷೆ ನೀಡುವಂತೆ ಪಾಕ್​ ಸರ್ಕಾರಕ್ಕೆ ಆಗ್ರಹಿಸಿದರು.

ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಅವರು ಈ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಅಪರಾಧಿಗಳನ್ನು ಬಂಧಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘಟನೆಯನ್ನು ಖಂಡಿಸಿದ್ದು, ತನಿಖೆ ನಡೆಸುವಂತೆ ಸಿಎಂಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಾಹನ ಡಿಕ್ಕಿ.. ಕರಿಯ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.