ETV Bharat / bharat

ಕಾಂಗ್ರೆಸ್​ಗೆ 'ಕೈ' ಹಿಡಿಯದ 150ಕ್ಕೂ ಹೆಚ್ಚು ಸಭೆ, ರೋಡ್ ಶೋಗಳು: ಮೂರು ರಾಜ್ಯಗಳಲ್ಲಿ ಭಾರಿ ಹಿನ್ನಡೆ - etv bharat kannada

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ ನಾಯಕರು 150ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದರು. ಆದರೆ, ಫಲಿತಾಂಶದಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ.

Etv Bharatdespite-150-rallies-congress-magic-fizzles-out-in-three-states-only-hope-from-telangana
ಕಾಂಗ್ರೆಸ್​ಗೆ 'ಕೈ' ಹಿಡಿಯದ 150ಕ್ಕೂ ಹೆಚ್ಚು ರೋಡ್ ಶೋಗಳು: ಮೂರು ರಾಜ್ಯಗಳಲ್ಲಿ ಹಿನ್ನಡೆ
author img

By ETV Bharat Karnataka Team

Published : Dec 3, 2023, 4:14 PM IST

ನವದೆಹಲಿ: ಲೋಕಸಭೆ ಚುನಾವಣೆಗೆ ಸೆಮಿಫೈನಲ್​ ಎಂದೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಇಂದು ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಬಾರಿ ಗೆಲ್ಲುವ ವಿಶ್ವಾಸ ಹೊಂದಿತ್ತು. ಆದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ 167 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭಾರಿ ಬಹುಮತ ಪಡೆಯುವತ್ತ ದಾಪುಗಾಲು ಹಾಕಿದೆ. ಇಲ್ಲಿ ಕಾಂಗ್ರೆಸ್ 64 ಸ್ಥಾನಗಳಿಗೆ ಕುಸಿತ ಕಂಡಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕೆಸಿಆರ್​ ನೇತೃತ್ವದ ಬಿಆರ್‌ಎಸ್ 39 ಸ್ಥಾನಗಳಿಗೆ ಇಳಿದಿದೆ.

ಪ್ರಮುಖ ಮೂರು ರಾಜ್ಯಗಳಲ್ಲಿ ಪಕ್ಷಕ್ಕೆ ಹಿನ್ನಡೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಜಂಟಿಯಾಗಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ 150ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಿದರೂ ರಾಜಸ್ಥಾನ ಹಾಗೂ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಪಕ್ಷ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ನಾಯಕರ ಪ್ರಕಾರ, ಆಗಸ್ಟ್ 22ರಿಂದ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು 42 ಸಾರ್ವಜನಿಕ ಸಭೆಗಳು ಮತ್ತು ಹಲವು ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಕಾಂಗ್ರೆಸ್​ನ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾದ ರಾಹುಲ್ ಗಾಂಧಿ ಅವರು ಅಕ್ಟೋಬರ್ 5 ರಿಂದ ಐದು ರಾಜ್ಯಗಳಲ್ಲಿ ಸುಮಾರು 64 ಸಾರ್ವಜನಿಕ ಸಭೆಗಳು, ಪಾದಯಾತ್ರೆಗಳು, ರೋಡ್ ಶೋಗಳು ಮತ್ತು ಜನರೊಂದಿಗೆ ಸಾರ್ವಜನಿಕ ಸಂವಾದಗಳನ್ನು ನಡೆಸಿದ್ದರು. ಅವರ ಸಹೋದರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ 44 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಈ ಮೂವರು ನಾಯಕರು ತೆಲಂಗಾಣದಲ್ಲಿ ಗರಿಷ್ಠ 55 ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ್ದರು ಎಂದು ಪಕ್ಷದ ನಾಯಕರು ಹೇಳಿದ್ದರು. ರಾಹುಲ್ ಗಾಂಧಿ ಅವರು ತೆಲಂಗಾಣದಲ್ಲಿ 26 ಸಾರ್ವಜನಿಕ ಸಭೆ ಮತ್ತು ರೋಡ್ ಶೋಗಳನ್ನು ಉದ್ದೇಶಿಸಿ ಮಾತನಾಡಿದ್ದರೆ, ಅವರ ಸಹೋದರಿ 16 ಮತ್ತು ಖರ್ಗೆ 13 ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಮಧ್ಯಪ್ರದೇಶದಲ್ಲಿ ಈ ಮೂವರು ನಾಯಕರು 34 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರೆ, ರಾಜಸ್ಥಾನದಲ್ಲಿ 29 ಸಾರ್ವಜನಿಕ ಸಭೆ ಮತ್ತು ಛತ್ತೀಸ್​ಗಢದಲ್ಲಿ 28 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರು ಹಲವಾರು ವಿಷಯಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ನಾಯಕರು ಐದು ರಾಜ್ಯಗಳಲ್ಲಿ, ಜಾತಿ ಆಧಾರಿತ ಜನಗಣತಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, 500 ರೂ.ಗೆ ಅಡುಗೆ ಅನಿಲ ಸಿಲಿಂಡರ್, 100 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ 1,500 ರೂ. ಸೇರಿದಂತೆ ಹಲವಾರು ಭರವಸೆಗಳನ್ನು ಘೋಷಿಸಿದ್ದರು. ಮತ್ತೊಂದೆಡೆ, ಬಿಜೆಪಿ ಇದಕ್ಕೆ ಪ್ರತಿಯಾಗಿ ಐದು ರಾಜ್ಯಗಳಲ್ಲಿ ಬಿರುಸಿನ ಪ್ರಚಾರವನ್ನು ನಡೆಸಿತ್ತು.

ಇದನ್ನೂ ಓದಿ: LIVE: ಹಿಂದಿ ಹೃದಯಭಾಗದ 3 ರಾಜ್ಯ ಗೆದ್ದು ಬೀಗಿದ ಬಿಜೆಪಿ; ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.