ETV Bharat / bharat

45ನೇ ವಯಸ್ಸಿಗೆ ಮುಖ್ಯಮಂತ್ರಿ ಪಟ್ಟ : ಉತ್ತರಾಖಂಡದ ಅತೀ ಕಿರಿಯ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ - ಉತ್ತರಾಖಂಡ ರಾಜಕೀಯ ಸುದ್ದಿ

ತೀರಥ್​ ಸಿಂಗ್​ ರಾಜೀನಾಮೆ ಬಳಿಕ ಉತ್ತರಾಖಂಡ್​ನ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಪುಷ್ಕರ್ ಸಿಂಗ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡೆಹ್ರಾಡೂನ್‌ನ ರಾಜಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರು ಧಾಮಿ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ..

Pushkar Singh Dhami
ಪುಷ್ಕರ್ ಸಿಂಗ್ ಧಾಮಿ
author img

By

Published : Jul 4, 2021, 7:08 PM IST

Updated : Jul 4, 2021, 7:21 PM IST

ಡೆಹ್ರಾಡೂನ್‌ : 45ನೇ ವಯಸ್ಸಿನಲ್ಲಿ ಉತ್ತರಾಖಂಡ್​​ನ 11ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಪುಷ್ಕರ್ ಸಿಂಗ್ ಧಾಮಿ ಗುಡ್ಡಗಾಡು ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ, ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು 49ನೇ ವಯಸ್ಸಿನಲ್ಲಿ ಉತ್ತರಾಖಂಡ್​​ನ ಮುಖ್ಯಮಂತ್ರಿಯಾಗಿ ರಾಜ್ಯದ ಅತಿ ಕಿರಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆ ಪುಷ್ಕರ್ ಸಿಂಗ್ ಧಾಮಿ ಪಾಲಾಗಿದೆ.

ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

ಧಾಮಿ ಕುಮಾವೂನ್ ಪ್ರದೇಶದಲ್ಲಿ ಖತಿಮಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಧಾಮಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆಪ್ತರು ಎನ್ನಲಾಗಿದೆ. ಜೊತೆಗೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭಗತ್ ಸಿಂಗ್ ಕೊಶಿಯಾರಿಯವರಿಗೆ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಸಹ ಧಾಮಿ ಸೇವೆ ಸಲ್ಲಿಸಿದ್ದಾರೆ.

ಪುಷ್ಕರ್ ಸಿಂಗ್ ಧಾಮಿ 1990ರಲ್ಲಿ ಮೊದಲ ಬಾರಿಗೆ ಯುವ ರಾಜಕೀಯಕ್ಕೆ ಎಂಟ್ರಿ ಕೊಟ್ರು. 1999ರವರೆಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ನ (ABVP)ಲ್ಲಿ ಹಾಗೂ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ವಿದ್ಯಾರ್ಥಿ ವಿಭಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ರು.

ರಾಜ್ಯದ ಸಮಸ್ಯೆಗಳು, ವಿವಾದ ವಿಚಾರಗಳ ಬಗ್ಗೆ ಹೆಚ್ಚಿನ ಜ್ಞಾನ ಹೊಂದಿರುವ ಧಾಮಿ ಉತ್ತರಾಖಂಡ ರಾಜ್ಯ ರಚನೆಯಾದ ನಂತರ 2002ರವರೆಗೆ ಮಾಜಿ ಮುಖ್ಯಮಂತ್ರಿಯ ಸಲಹೆಗಾರರಾಗಿ ಸಹ ಕೆಲಸ ಮಾಡಿದರು ಎಂದು ಅವರ ವೆಬ್​ಸೈಟ್​ ಮಾಹಿತಿ ನೀಡುತ್ತದೆ. ನಂತರ 2008ರವರೆಗೆ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದರು.

ಈ ಸಮಯದಲ್ಲಿ ಧಾಮಿ ರಾಜ್ಯಾದ್ಯಂತ ಯುವ ರ್ಯಾಲಿಗಳು ಮತ್ತು ಸಭೆಗಳನ್ನು ಆಯೋಜಿಸಿದರು. ಇವರ ಹೋರಾಟದ ಪರಿಣಾಮವಾಗಿ, ರಾಜ್ಯದ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಕರಿಗೆ ಶೇ.70ರಷ್ಟು ಮೀಸಲಾತಿ ಪಡೆಯುವಲ್ಲಿ ಅಂದಿನ ರಾಜ್ಯ ಸರ್ಕಾರ ಯಶಸ್ವಿಯಾಯಿತು ಎಂದು ಧಾಮಿ ತಮ್ಮ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಉತ್ತರಾಖಂಡ್​​ನ ಹೊಸ ಮುಖ್ಯಮಂತ್ರಿ ಧಾಮಿ ಯುವಜನತೆ ಬಗ್ಗೆ ವಿಶೇಷ ಒಲವು ಹಾಗೂ ಕಾಳಜಿ ಹೊಂದಿದ್ದಾರೆ ಎನ್ನಲಾಗಿದೆ. ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗಿರುವುದು ರಾಜ್ಯದ ಪ್ರಮುಖ ಸಮಸ್ಯೆಯಾಗಿದೆ. ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಆಗ ಹಳ್ಳಿಗಳಿಂದ ವಲಸೆ ಹೋಗುವುದನ್ನು ತಡೆಯಲು ಸಾಧ್ಯ ಎಂದು ಧಾಮಿ ಹೇಳುತ್ತಾರೆ.

Last Updated : Jul 4, 2021, 7:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.