ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡೈಮಂಡ್ ಹಾರ್ಬರ್ ಶಾಸಕ ದೀಪಕ್ ಕುಮಾರ್ ಹಾಲ್ದರ್ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.
ಹಾಲ್ದರ್ ಅವರು ತೃಣಮೂಲ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಟಿಎಂಸಿಗೆ ರಾಜೀನಾಮೆ ನೀಡಿದ್ದರೂ, ಇನ್ನೂ ಡೈಮಂಡ್ ಹಾರ್ಬರ್ ಶಾಸಕರಾಗಿ ಮುಂದುವರೆಯಲಿದ್ದಾರೆ.
ಓದಿ: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಡ್ಯಾನ್ಸ್.. ವಿಡಿಯೋ!
ಇಂದು ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಅವರು ಪಕ್ಷದ ಧ್ವಜವನ್ನು ನೀಡುವ ಮೂಲಕ ಅವರನ್ನು ಬಿಜೆಪಿಗೆ ಸ್ವಾಗತಿಸಿದರು. ಇತರ ಕೆಲವು ಜಿಲ್ಲಾ ಮಟ್ಟದ ನಾಯಕರು ಮತ್ತು ಟಿಎಂಸಿಯ ಕಾರ್ಯಕರ್ತರು ಇಂದು ಬಿಜೆಪಿಗೆ ಸೇರಿದರು.