ನವದೆಹಲಿ: ದಿಗ್ವಿಜಯ್ ಸಿಂಗ್ ನಿಲುವುಗಳು 'ಪಾಕಿಸ್ತಾನ ಪರ'ವಾಗಿವೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಜಿತಿನ್ ಪ್ರಸಾದ್ ಟೀಕಿಸಿದ್ದಾರೆ. ಮುಂದೊಂದು ದಿನ ಸಿಂಗ್ ಅವರು, 'ಇಂದಿರಾ ಜಿ' ಅವರನ್ನೂ ಖಂಡಿಸಬಹುದು ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ ದಿಗ್ವಿಜಯ್ ಸಿಂಗ್, ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡುತ್ತ, ಜಮ್ಮು-ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಅತ್ಯಂತ ಬೇಸರದ ನಿರ್ಧಾರವಾಗಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಈ ಬಗ್ಗೆ ಮರುಪರಿಶೀಲನೆ ನಡೆಸುವುದಾಗಿ ಹೇಳಿದ್ದರು. ಇದು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ.
![Digvijay known for 'pro-Pakistan' views: Jitin Prasada](https://etvbharatimages.akamaized.net/etvbharat/prod-images/12112922_zxc.jpg)
ಉತ್ತರ ಪ್ರದೇಶ ಮೂಲದ ಪ್ರಸಾದ್ ಅವರು ಇತ್ತೀಚೆಗೆ ಕಾಂಗ್ರೆಸ್ ಜೊತೆಗಿನ ತಮ್ಮ ಕುಟುಂಬದ ಮೂರು ತಲೆಮಾರಿನ ಸಂಬಂಧ ಕಡಿದುಕೊಂಡು ಬಿಜೆಪಿಗೆ ಸೇರಿದ್ದಾರೆ. ಜಿತಿನ್ ಪ್ರಸಾದ್ ಕೇಂದ್ರದಲ್ಲಿ ಸಚಿವರಾಗಿದ್ದರು. ಈ ಹಿಂದೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು.
ಇದನ್ನೂ ಓದಿ: ಕಾಂಗ್ರೆಸ್ಗೆ ಬಿಗ್ ಶಾಕ್: ಬಿಜೆಪಿ ಸೇರಿದ ರಾಹುಲ್ ಆಪ್ತ ಜಿತಿನ್ ಪ್ರಸಾದ್