ಚಂಡೀಗಢ: ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆಗೆ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ಮೇಲೆ ನೇರ ದಾಳಿ ನಡೆಸುತ್ತಿದೆ ಎಂದು ಹೇಳಿರುವ ಅವರು, ಈ ನಿರ್ಧಾರವನ್ನು ಶೀಘ್ರವಾಗಿ ಹಿಂಪಡೆಯಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.
-
I strongly condemn the GoI's unilateral decision to give additional powers to BSF within 50 KM belt running along the international borders, which is a direct attack on the federalism. I urge the Union Home Minister @AmitShah to immediately rollback this irrational decision.
— Charanjit S Channi (@CHARANJITCHANNI) October 13, 2021 " class="align-text-top noRightClick twitterSection" data="
">I strongly condemn the GoI's unilateral decision to give additional powers to BSF within 50 KM belt running along the international borders, which is a direct attack on the federalism. I urge the Union Home Minister @AmitShah to immediately rollback this irrational decision.
— Charanjit S Channi (@CHARANJITCHANNI) October 13, 2021I strongly condemn the GoI's unilateral decision to give additional powers to BSF within 50 KM belt running along the international borders, which is a direct attack on the federalism. I urge the Union Home Minister @AmitShah to immediately rollback this irrational decision.
— Charanjit S Channi (@CHARANJITCHANNI) October 13, 2021
ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಹಾದುಹೋಗುವ 50 ಕಿಮೀ ವ್ಯಾಪ್ತಿಯಲ್ಲಿ ಬಿಎಸ್‌ಎಫ್‌ಗೆ ಹೆಚ್ಚುವರಿ ಅಧಿಕಾರ ನೀಡುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಅಮಿತ್ ಅವರನ್ನು ಒತ್ತಾಯಿಸುತ್ತೇನೆ ಎಂದು ಚನ್ನಿ ಟ್ವೀಟ್ ಮಾಡಿದ್ದಾರೆ.
-
Our worst fears are coming true. With Pakistan backed Taliban taking over Afganistan, terrorism is increasing in Kashmir. Minorities are being selectively targeted & now five soldiers have been killed in action in Surankote sector. We need to deal with it decisively and firmly. https://t.co/mWojSeLZHB
— Capt.Amarinder Singh (@capt_amarinder) October 11, 2021 " class="align-text-top noRightClick twitterSection" data="
">Our worst fears are coming true. With Pakistan backed Taliban taking over Afganistan, terrorism is increasing in Kashmir. Minorities are being selectively targeted & now five soldiers have been killed in action in Surankote sector. We need to deal with it decisively and firmly. https://t.co/mWojSeLZHB
— Capt.Amarinder Singh (@capt_amarinder) October 11, 2021Our worst fears are coming true. With Pakistan backed Taliban taking over Afganistan, terrorism is increasing in Kashmir. Minorities are being selectively targeted & now five soldiers have been killed in action in Surankote sector. We need to deal with it decisively and firmly. https://t.co/mWojSeLZHB
— Capt.Amarinder Singh (@capt_amarinder) October 11, 2021
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ನಮ್ಮ ಸೈನಿಕರು ಕಾಶ್ಮೀರದಲ್ಲಿ ಉಗ್ರರಿಂದ ಹುತಾತ್ಮರಾಗುತ್ತಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಪಂಜಾಬ್‌ಗೆ ಹೆಚ್ಚು ಹೆಚ್ಚು ಶಸ್ತ್ರಾಸ್ತ್ರಗಳು ಮತ್ತು ಮಾದಕ ದ್ರವ್ಯಗಳನ್ನು ಬರುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಬಿಎಸ್ಎಫ್ ಶಕ್ತಿ ಹೆಚ್ಚಿಸಿಕೊಳ್ಳುವುದರಿಂದ ನಮ್ಮ ಬಲ ಹೆಚ್ಚಾಗುತ್ತದೆ. ಕೇಂದ್ರ ಸಶಸ್ತ್ರ ಪಡೆಗಳನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ಮನವಿ ಮಾಡಿದ್ದರು.
ಬಿಎಸ್ಎಫ್ ಅಧಿಕಾರ ವ್ಯಾಪ್ತಿ ಕಿರಿಕಿರಿ..
ಬೇರೆ ದೇಶಗಳೊಂದಿಗೆ ಗಡಿ ಹಂಚಿಕೊಳ್ಳುವ ರಾಜ್ಯಗಳಲ್ಲಿ ಕೇಂದ್ರ ಸಶಸ್ತ್ರ ಪಡೆಗಳು ಗಡಿಯಿಂದ ಇಂತಿಷ್ಟು ಕಿಲೋಮೀಟರ್ ಎಂಬುದರ ಆಧಾರದ ಮೇಲೆ ಅಧಿಕಾರ ವ್ಯಾಪ್ತಿಯನ್ನು ಹೊಂದಿರುತ್ತವೆ. ಈ ಮೊದಲು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆಗಳಿಂದ ಕೇವಲ 15 ಕಿಲೋಮೀಟರ್ ಅಧಿಕಾರ ವ್ಯಾಪ್ತಿಯನ್ನು ಬಿಎಸ್ಎಫ್ ಹೊಂದಿತ್ತು.
ಈಗ ಆ 15 ಕಿಲೋಮೀಟರ್ ವ್ಯಾಪ್ತಿಯನ್ನು 50 ಕಿಲೋಮೀಟರ್ಗೆ ವಿಸ್ತರಣೆ ಮಾಡಲಾಗಿದೆ. ಪಾಕ್ನಿಂದ ದಾಳಿಗಳು, ಶಸ್ತ್ರಾಸ್ತ್ರ ಸಾಗಣೆ ಮತ್ತು ಮಾದಕ ವಸ್ತುಗಳ ಸಾಗಣೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಐಟಿ ದಾಳಿಯ ವೇಳೆ 1,200 ಕೋಟಿ ರೂ ನಗದು ಜಪ್ತಿ: ಅಚ್ಚರಿ ಮೂಡಿಸುತ್ತೆ ಔಷಧ ಉತ್ಪಾದಕ ಕಂಪನಿಯ ತೆರಿಗೆ ವಂಚನೆ