ETV Bharat / bharat

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದಿಗ್ವಿಜಯ್ ಹೇಳಿಕೆ ಒಪ್ಪುವುದಿಲ್ಲ: ರಾಹುಲ್ ಗಾಂಧಿ - ದಿಗ್ವಿಜಯ್ ಹೇಳಿಕೆ ಒಪ್ಪುವುದಿಲ್ಲ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಎಲ್ಲಿದೆ ಎಂದು ಕೇಳಿದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. ದಿಗ್ವಿಜಯ ಸಿಂಗ್ ಅವರ ಹೇಳಿಕೆಯು ಕಾಂಗ್ರೆಸ್​ ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಇನ್ನೋರ್ವ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

Dont agree with him Rahul Gandhi on Digvijaya Singhs remark

author img

By

Published : Jan 24, 2023, 3:42 PM IST

ನವದೆಹಲಿ: ಮೋದಿ ಸರ್ಕಾರ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತು ದಿಗ್ವಿಜಯ ಸಿಂಗ್ ಅವರ ವೈಯಕ್ತಿಕ ಹೇಳಿಕೆಯನ್ನು ತಾವು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ಆದರೆ, ಹಾಗಂತ ದಿಗ್ವಿಜಯ್ ಹೇಳಿಕೆಯನ್ನು ರಾಹುಲ್ ಖಂಡಿಸಲಿಲ್ಲ. ಸರ್ಜಿಕಲ್ ಸ್ಟ್ರೈಕ್‌ಗಳ ಕುರಿತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಯು ಭಾರಿ ವಿವಾದ ಸೃಷ್ಟಿಸಿದೆ. ಸಿಂಗ್ ಹೇಳಿಕೆಯು ರಕ್ಷಣಾ ಪಡೆಗಳ ನೈತಿಕತೆಯನ್ನು ಕುಗ್ಗಿಸುವಂಥ ಮಾತಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ದಿಗ್ವಿಜಯ್ ಅವರ ಹೇಳಿಕೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ನಾವು ಅದನ್ನು ಒಪ್ಪುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಕಾಂಗ್ರೆಸ್​ನ ಅಧಿಕೃತ ನಿಲುವು. ಅವರು (ಸಶಸ್ತ್ರ ಪಡೆಗಳು) ಯಾವುದೇ ಪುರಾವೆ ಒದಗಿಸಬೇಕಾಗಿಲ್ಲ ಎಂದು ಹೇಳಿದರು.

ಅಂತರ ಕಾಯ್ದುಕೊಂಡ ಪಕ್ಷ: ಏತನ್ಮಧ್ಯೆ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಪಕ್ಷ ಅಂತರ ಕಾಯ್ದುಕೊಂಡಿದೆ. ದಿಗ್ವಿಜಯ್ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಮತ್ತು ಅದು ಪಕ್ಷದ ಅಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದಾರೆ. ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ಅವರದೇ ಆಗಿವೆ ಮತ್ತು ಅವು ಕಾಂಗ್ರೆಸ್ ನಿಲುವನ್ನು ಪ್ರತಿಬಿಂಬಿಸುವುದಿಲ್ಲ.

ಯುಪಿಎ ಸರ್ಕಾರವು 2014 ರ ಮೊದಲೇ ಸರ್ಜಿಕಲ್ ಸ್ಟ್ರೈಕ್​ಗಳನ್ನು ನಡೆಸಿತ್ತು. ರಾಷ್ಟ್ರೀಯ ಹಿತಾಸಕ್ತಿಯ ಎಲ್ಲ ಮಿಲಿಟರಿ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ ಮತ್ತು ಬೆಂಬಲಿಸುತ್ತದೆ ಎಂದು ಜೈರಾಮ್ ರಮೇಶ್ ಟ್ವಿಟರ್​ನಲ್ಲಿ ಸ್ಪಷ್ಟಪಡಿಸಿದ್ದಾರೆ. ಶ್ರೀನಗರದಿಂದ ದೆಹಲಿಗೆ ತನ್ನ ಸಿಬ್ಬಂದಿಯನ್ನು ಕಳುಹಿಸುವ ಸಿಆರ್‌ಪಿಎಫ್ ಮನವಿಯನ್ನು ಸರ್ಕಾರ ಒಪ್ಪಲಿಲ್ಲ. ಇದೇ ಕಾರಣದಿಂದ 2019 ರಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಗೆ 40 ಯೋಧರು ಪ್ರಾಣ ತ್ಯಾಗ ಮಾಡಬೇಕಾಯಿತು ಎಂದು ಸೋಮವಾರ ದಿಗ್ವಿಜಯ ಸಿಂಗ್ ಆರೋಪಿಸಿದ್ದರು.

ಅವರು ಸರ್ಜಿಕಲ್ ಸ್ಟ್ರೈಕ್‌ಗಳ ಬಗ್ಗೆ ಮಾತನಾಡುತ್ತಾರೆ. ಹಲವಾರು ಜನರನ್ನು ಕೊಂದಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಯಾವುದೇ ಪುರಾವೆಗಳನ್ನು ನೀಡಲಾಗಿಲ್ಲ. ಅವರು ಸುಳ್ಳಿನ ಕಂತೆ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಆರೋಪಿಸಿದ್ದರು.

ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ ದಿಗ್ವಿಜಯ ಸಿಂಗ್​: ಪುಲ್ವಾಮಾ ಘಟನೆಯಲ್ಲಿ ಭಯೋತ್ಪಾದಕರಿಗೆ 300 ಕೆಜಿ ಆರ್‌ಡಿಎಕ್ಸ್ ಎಲ್ಲಿಂದ ಸಿಕ್ಕಿತು? ಡಿಎಸ್‌ಪಿ ದೇವಿಂದರ್ ಸಿಂಗ್ ಭಯೋತ್ಪಾದಕರೊಂದಿಗೆ ಸಿಕ್ಕಿಬಿದ್ದಿದ್ದರು. ಆದರೆ, ನಂತರ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು? ನಾವು ಭಾರತ ಮತ್ತು ಪಾಕಿಸ್ತಾನ ಪ್ರಧಾನಿಗಳ ನಡುವಿನ ಸ್ನೇಹದ ಬಗ್ಗೆಯೂ ತಿಳಿದುಕೊಳ್ಳಲು ಬಯಸುತ್ತೇವೆ ಎಂದು ಸಿಂಗ್ ಟ್ವೀಟ್ ಕೂಡ ಮಾಡಿದ್ದಾರೆ.

ಅಲ್ಲದೇ ಟ್ವೀಟ್​ ಜೊತೆಗೆ ತಮ್ಮ ವಿಡಿಯೋ ಮೆಸೇಜ್ ಸಹ ಪೋಸ್ಟ್ ಮಾಡಿದ್ದಾರೆ. ಪುಲ್ವಾಮಾದಲ್ಲಿ 40 ಸಿಆರ್‌ಪಿಎಫ್ ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದರು. ಆದರೆ, ಮೂರು ಕ್ವಿಂಟಲ್ ಆರ್‌ಡಿಎಕ್ಸ್ ಎಲ್ಲಿಂದ ಬಂದಿತು ಎಂಬುದನ್ನು ಬಹಿರಂಗಪಡಿಸಲು ಈ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ವಿಡಿಯೋದಲ್ಲಿ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಇಷ್ಟು ಮಾತ್ರವಲ್ಲದೇ ಭಯೋತ್ಪಾದಕರ ಜೊತೆ ಸಿಕ್ಕಿಬಿದ್ದ ಡಿಎಸ್​ಪಿ ದೇವಿಂದರ್ ಸಿಂಗ್ ಎಲ್ಲಿದ್ದಾರೆ ಎಂಬ ಬಗ್ಗೆ ಸರ್ಕಾರ ಉತ್ತರಿಸುತ್ತಿಲ್ಲ. ಆವರನ್ನು ಏಕೆ ಬಿಟ್ಟು ಬಿಡಲಾಯಿತು ಮತ್ತು ಅವರ ವಿರುದ್ಧ ದೇಶದ್ರೋಹದ ಕೇಸ್ ಯಾಕೆ ದಾಖಲಿಸಲಿಲ್ಲ? ಪ್ರಧಾನಿಗಳಿಬ್ಬರೂ ಒಬ್ಬರನ್ನೊಬ್ಬರು ಹೊಗಳುತ್ತಿರುವ ಮಧ್ಯೆ ಪಾಕಿಸ್ತಾನದ ಪ್ರಧಾನಿಯೊಂದಿಗೆ ಅವರು ಯಾವ ರೀತಿಯ ಸಂಬಂಧವನ್ನು ಹೊಂದಿದ್ದಾರೆ ಎಂಬುದನ್ನು ನಾವು ಪ್ರಧಾನಿಯಿಂದ ತಿಳಿದುಕೊಳ್ಳಲು ಬಯಸುತ್ತೇವೆ. ಕನಿಷ್ಠ ಅವರು ಈ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ದಿಗ್ವಿಜಯ್ ಸಿಂಗ್ ವಿಡಿಯೋದಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಶ್ರದ್ಧಾ ವಾಲ್ಕರ್​ ಹತ್ಯೆ ಪ್ರಕರಣ: ದೆಹಲಿ ಪೊಲೀಸರಿಂದ ಇಂದು 3000 ಪುಟಗಳ ಚಾರ್ಜ್​ ಶೀಟ್​ ಸಲ್ಲಿಕೆ ಸಾಧ್ಯತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.