ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ದಿಢೀರ್ ಬೆಳವಣಿಗೆವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು.
ಕಾಂಗ್ರೆಸ್ನಲ್ಲಿ ತಮಗೆ ಅವಮಾನವಾಗಿದೆ ಎಂದು ಹೇಳಿಕೊಂಡಿದ್ದ ಸಿಂಗ್, ನೇರವಾಗಿ ನವಜೋತ್ ಸಿಂಗ್ ಸಿಧು ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಮೂಲಕ ತಾವು ಬೇರೆ ಪಕ್ಷಕ್ಕೆ ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಅಮಿತ್ ಶಾ ಭೇಟಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆಂಬುದರ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
-
Met Union Home Minister @AmitShah ji in Delhi. Discussed the prolonged farmers agitation against #FarmLaws & urged him to resolve the crisis urgently with repeal of the laws & guarantee MSP, besides supporting Punjab in crop diversification. #NoFarmersNoFood
— Capt.Amarinder Singh (@capt_amarinder) September 29, 2021 " class="align-text-top noRightClick twitterSection" data="
">Met Union Home Minister @AmitShah ji in Delhi. Discussed the prolonged farmers agitation against #FarmLaws & urged him to resolve the crisis urgently with repeal of the laws & guarantee MSP, besides supporting Punjab in crop diversification. #NoFarmersNoFood
— Capt.Amarinder Singh (@capt_amarinder) September 29, 2021Met Union Home Minister @AmitShah ji in Delhi. Discussed the prolonged farmers agitation against #FarmLaws & urged him to resolve the crisis urgently with repeal of the laws & guarantee MSP, besides supporting Punjab in crop diversification. #NoFarmersNoFood
— Capt.Amarinder Singh (@capt_amarinder) September 29, 2021
ಇದನ್ನೂ ಓದಿ: ಅಮಿತ್ ಶಾ ನಿವಾಸಕ್ಕೆ ಪಂಜಾಬ್ ಮಾಜಿ ಸಿಎಂ ಕ್ಯಾ.ಅಮರೀಂದರ್ ಸಿಂಗ್ ಭೇಟಿ
ಅಮಿತ್ ಶಾ ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಅಮರೀಂದರ್ ಸಿಂಗ್ ಟ್ವೀಟ್ ಮಾಡಿದ್ದು, ರೈತರ ಸಮಸ್ಯೆ ಹಾಗೂ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಬಗ್ಗೆ ಈ ವೇಳೆ ಚರ್ಚಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಅಮಿತ್ ಶಾ ಅವರನ್ನು ಭೇಟಿ ಮಾಡಿ, ಕೃಷಿ ಕಾಯ್ದೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಹೊಸ ಕಾನೂನು ರದ್ಧುಗೊಳಿಸುವುದರೊಂದಿಗೆ ರೈತರ ಸಮಸ್ಯೆ ತುರ್ತಾಗಿ ಬಗೆಹರಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ.