ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಲಕ್ಷ್ಮಣ್ ಸವದಿ ಸಂಪರ್ಕದಲ್ಲಿದ್ದಾರೆ ಎಂಬ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿರುಗೇಟು ನೀಡಿದ್ದಾರೆ. ಯಾರೋ ತಲೆಕೆಟ್ಟವರು ಮಾತನಾಡಿದ್ದಕ್ಕೆ ನಾನು ಉತ್ತರ ಕೊಡುವುದಕ್ಕೆ ತಯಾರಿಲ್ಲ ಎಂದಿದ್ದಾರೆ.
ಗೋವಾದ ಪಣಜಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಂಪುಟ ವಿಸ್ತರಣೆ ಅವರ ಸರ್ಕಾರಕ್ಕೆ ಬಿಟ್ಟಿದ್ದು, ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಯಾರನ್ನು ಬೇಕಾದರೂ ಮಂತ್ರಿ ಮಾಡಲಿ, ಬಿಡಲಿ. ಆದರೆ, ದಿನಕ್ಕೊಬ್ಬರು ಒಂದೊಂದು ಹೇಳಿಕೆ ಕೊಡುತ್ತಿದ್ದಾರೆ.
ಸಿಎಂ ಬೊಮ್ಮಾಯಿ ಹಾಗೂ ಅವರ ಪಕ್ಷದ ಅಧ್ಯಕ್ಷರಿಗೆ ಕಂಟ್ರೋಲ್ ಮಾಡಲಾಗುತ್ತಿಲ್ಲ. ರಾಜ್ಯ ಬಿಡಿ ಬಿಜೆಪಿಯ ಕೇಂದ್ರದ ನಾಯಕರಿಂದಲೇ ಕಂಟ್ರೋಲ್ ಮಾಡಲಾಗುತ್ತಿಲ್ಲ ಎಂದು ಕುಟುಕಿದರು.
ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ಅಖಾಡಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಂಟ್ರಿ ಕೊಟ್ಟಿದ್ದಾರೆ. ಗೋವಾ ಕನ್ನಡಿಗ ಮತದಾರರನ್ನು ಸೆಳೆಯಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸೇರಿ ಸ್ಥಳೀಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ಮಾಡುತ್ತಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ