ETV Bharat / bharat

'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ - ಮಮತಾ ಬ್ಯಾನರ್ಜಿ

One Nation, One Election Concept: 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದಿದ್ದಾರೆ.

do-not-agree-with-concept-of-one-nation-one-election-mamata-banerjee
'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ
author img

By ETV Bharat Karnataka Team

Published : Jan 11, 2024, 11:01 PM IST

ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ ಸಮಿತಿಗೆ ಗುರುವಾರ ಪತ್ರ ಬರೆದಿರುವ ಅವರು, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪರಿಕಲ್ಪನೆಗೆ ತಮ್ಮ ಅಸಮ್ಮತಿಯನ್ನು ಸೂಚಿಸಿದ್ದಾರೆ. 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯು ದೇಶದ ಸಾಂವಿಧಾನಿಕ ವ್ಯವಸ್ಥೆಗಳ ಮೂಲ ರಚನೆಗೆ ವಿರುದ್ಧವಾಗಿರುತ್ತದೆ ಎಂದು ಮಮತಾ ಹೇಳಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯನ್ನು ಪರಿಶೀಲಿಸುವ ಉನ್ನತ ಮಟ್ಟದ ಸಮಿತಿಯ ಕಾರ್ಯದರ್ಶಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ತಮ್ಮ ಪತ್ರ ಬರೆದಿದ್ದಾರೆ. 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ಕೇಂದ್ರ ಮತ್ತು ರಾಜ್ಯ ಮಟ್ಟಗಳಿಗೆ ಏಕಕಾಲದಲ್ಲಿ ನಡೆಸಲಾಯಿತು. ಕೆಲವು ವರ್ಷಗಳ ಕಾಲ ಇಂತಹ ಏಕಕಾಲಿಕತೆ ಇತ್ತು. ಆದರೆ, ಅಂದಿನ ಸಹಬಾಳ್ವೆಯು ಒಡೆದು ಹೋಗಿದೆ. ನೀವು ರೂಪಿಸಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಮುಂದುವರೆದು, ನಿಮ್ಮ ಸೂತ್ರೀಕರಣ ಮತ್ತು ಪ್ರಸ್ತಾವನೆಯನ್ನು ನಾವು ಒಪ್ಪುವುದಿಲ್ಲ. ಇದರಲ್ಲಿ ಮೂಲಭೂತ ಪರಿಕಲ್ಪನೆಯ ಸ್ಪಷ್ಟವಾಗಿಲ್ಲ ಎಂದಿರುವ ಮಮತಾ, 'ಒಂದು ರಾಷ್ಟ್ರ'ದ ಅರ್ಥದ ಬಗ್ಗೆ ಪ್ರಶ್ನೆಯನ್ನೂ ಎತ್ತಿದ್ದಾರೆ. ಐತಿಹಾಸಿಕ-ರಾಜಕೀಯ-ಸಾಂಸ್ಕೃತಿಕ ಅರ್ಥದಲ್ಲಿ ಒಂದು ರಾಷ್ಟ್ರದ ಅರ್ಥವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ, ತತ್ಕ್ಷಣದ ಸಂದರ್ಭದಲ್ಲಿ ಪದದ ಸಾಂವಿಧಾನಿಕ ಮತ್ತು ರಚನಾತ್ಮಕ ಪರಿಣಾಮವು ನನಗೆ ನಿಖರವಾದ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಭಾರತೀಯ ಸಂವಿಧಾನವು 'ಒಂದು ರಾಷ್ಟ್ರ, ಒಂದು ಸರ್ಕಾರ' ಎಂಬ ಪರಿಕಲ್ಪನೆಯನ್ನು ಅನುಸರಿಸುತ್ತದೆಯೇ?, ಪರಿಕಲ್ಪನೆಯು ಎಲ್ಲಿಂದ ಬಂತು ಎಂಬ ಮೂಲ ಒಗಟನ್ನು ಪರಿಹರಿಸದ ಹೊರತು, ಆಕರ್ಷಕವಾದ ಪದಗುಚ್ಛದ ಮೇಲೆ ಯಾವುದೇ ದೃಢವಾದ ದೃಷ್ಟಿಕೋನವನ್ನು ತಲುಪುವುದು ಕಷ್ಟ. ಸಹಬಾಳ್ವೆಯ ಪರಿಚಯಕ್ಕಾಗಿ ಅಕಾಲಿಕ ಸಾರ್ವತ್ರಿಕ ಚುನಾವಣೆಗಳಿಗೆ ಹೋಗಲು ಒತ್ತಾಯಿಸಬಾರದು. ಅದು ತಮ್ಮ ವಿಧಾನಸಭೆಯನ್ನು ಆಯ್ಕೆ ಮಾಡಿದ ಜನರ ಚುನಾವಣಾ ನಂಬಿಕೆಯ ಮೂಲಭೂತ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಅಥವಾ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸದಿರಬಹುದು. ಉದಾಹರಣೆಗೆ ಅವಿಶ್ವಾಸ ಮತಕ್ಕೆ ಮೈತ್ರಿ ಮುರಿಯುವುದು. ಕಳೆದ 50 ವರ್ಷಗಳಲ್ಲಿ ಲೋಕಸಭೆಯು ಹಲವಾರು ಅಕಾಲಿಕ ವಿಸರ್ಜನೆಗಳಿಗೆ ಸಾಕ್ಷಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ಚುನಾವಣೆಯೊಂದೇ ಆಯ್ಕೆಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ವಿಷಯದ ಬಗ್ಗೆ ಅಭಿಪ್ರಾಯಗಳನ್ನು ಕೇಳಿ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿತ್ತು. ಇದಕ್ಕೆ ಮಮತಾ ಈ ಪತ್ರ ಬರೆದು ತಮ್ಮ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾರು ಅಪಘಾತ: ಮೆಹಬೂಬಾ ಮುಫ್ತಿ ಪ್ರಾಣಾಪಾಯದಿಂದ ಪಾರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.