ETV Bharat / bharat

ಗರ್ಭಿಣಿಗೆ ಹೆರಿಗೆ ಮಾಡಿಸಲು ವೈದ್ಯರು ಹಿಂದೇಟು.. ರಸ್ತೆಯಲ್ಲೇ ಶಿಶುವಿಗೆ ಜನ್ಮ ನೀಡಿದ ತಾಯಿ! - ರಸ್ತೆಯಲ್ಲೇ ಶಿಶುವಿಗೆ ಜನ್ಮ ನೀಡಿದ ತಾಯಿ

Doctors refuse deliver pregnant woman: ಗರ್ಭಿಣಿಯೋರ್ವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ. ಇದರ ಬೆನ್ನಲ್ಲೇ ಮಹಿಳೆ ನಡುರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.

Doctors refuse deliver pregnant woman
Doctors refuse deliver pregnant woman
author img

By

Published : Jan 26, 2022, 7:48 PM IST

ಹೈದರಾಬಾದ್​​: ವೈದ್ಯೋ ನಾರಾಯಣ ಹರಿಃ ಎನ್ನುವ ಮಾತಿದೆ. ಅನೇಕ ಸಂದರ್ಭಗಳಲ್ಲಿ ವೈದ್ಯರು ತಮ್ಮ ಪ್ರಾಣ ಮುಡಿಪಾಗಿಟ್ಟು ರೋಗಿಗಳ ಪ್ರಾಣ ಉಳಿಸಿರುವ ನಿದರ್ಶನಗಳಿವೆ. ಆದರೆ, ತೆಲಂಗಾಣದಲ್ಲಿ ಇದಕ್ಕೆ ತದ್ವಿರುದ್ಧವಾಗಿರುವ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ.

ನಾಗರ್​ಕರ್ನೂಲ್​​ ಜಿಲ್ಲೆಯ ಅಚಂಪೇಟ್​​ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಪ್ರಕರಣ ನಡೆದಿದ್ದು, ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯೋರ್ವರಿಗೆ ಕೋವಿಡ್​-19 ದೃಢಪಟ್ಟಿರುವ ಕಾರಣ ಆಸ್ಪತ್ರೆಯೊಳಗೆ ದಾಖಲು ಮಾಡಿಕೊಳ್ಳಲು ವೈದ್ಯರು ನಿರಾಕರಣೆ ಮಾಡಿದ್ದಾರೆ. ಹೀಗಾಗಿ, ಆಸ್ಪತ್ರೆ ಹೊರಗಿನ ರಸ್ತೆಯಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿಗಳು, ಆಸ್ಪತ್ರೆಗೆ ಬಂದ ಗರ್ಭಿಣಿಯನ್ನ ಕೋವಿಡ್​ ಪರೀಕ್ಷೆಗೊಳಪಡಿಸಲಾಗಿದ್ದು, ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ಇದೇ ಕಾರಣಕ್ಕಾಗಿ ಬೇರೆ ಆರೋಗ್ಯ ಕೇಂದ್ರಕ್ಕೆ ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆ ಆಗಿದೆ. ಇದಾದ ಬಳಿಕ ಆಕೆಯನ್ನ ಒಳಗೆ ಕರೆತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸ್ಪೋರ್ಟ್ಸ್​ ಕಾಂಪ್ಲೆಕ್ಸ್​ಗೆ ಟಿಪ್ಪು ಸುಲ್ತಾನ್​ ಹೆಸರು.. ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಆಕ್ರೋಶ

ಸಂಬಂಧಪಟ್ಟ ವೈದ್ಯಕೀಯ ಸಿಬ್ಬಂದಿ ಅಮಾನತು: ಘಟನೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದಕ್ಕಾಗಿ ಸಮುದಾಯ ಆರೋಗ್ಯ ಕೇಂದ್ರದ ಸೂಪರಿಂಡೆಂಟ್​​ ಮತ್ತು ವೈದ್ಯರನ್ನ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಕೆ. ರಮೇಶ್ ರೆಡ್ಡಿ ತಿಳಿಸಿದ್ದಾರೆ.

ಕೋವಿಡ್​​-19 ದೃಢಪಟ್ಟ ಗರ್ಭಿಣಿಯರಿಗೆ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುವುದನ್ನ ನಿರಾಕರಿಸದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಇದರ ಮಧ್ಯೆ ಕೂಡ ಇಂತಹ ಘಟನೆ ನಡೆದಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.