ETV Bharat / bharat

ಯಾರೂ ಭಯ ಪಡಬೇಡಿ, ಯುಪಿ ಚುನಾವಣಾ ಗೆಲುವಿಗೆ ಶ್ರಮಿಸಿ: ಕಾರ್ಯಕರ್ತರಿಗೆ ಪ್ರಿಯಾಂಕಾ ಕರೆ

ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.

Priyanka
Priyanka
author img

By

Published : Jul 18, 2021, 1:20 PM IST

ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ಶ್ರಮಿಸಿ ಎಂದು ಕಾರ್ಯಕರ್ತರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಶನಿವಾರ ತಮ್ಮ ಪಕ್ಷದ ಕಚೇರಿಯಲ್ಲಿ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾರೂ ಭಯಪಡಬೇಡಿ. ಉತ್ತರಪ್ರದೇಶದ ಎಲ್ಲಾ ಪಂಚಾಯಿತಿಗಳಲ್ಲೂ ಕಾಂಗ್ರೆಸ್ ಅಸ್ತಿತ್ವ ಹೊಂದಿದೆ. ಶೀಘ್ರದಲ್ಲೇ ಗ್ರಾಮ ಪಂಚಾಯತ್​ ಮಟ್ಟದ ಸಮಿತಿಗಳನ್ನು ರಚಿಸಲಾಗುವುದು ಎಂದರು.

ಇಂದಿನಿಂದ ಚುನಾವಣೆವರೆಗೆ 24 ಗಂಟೆಯೂ ಕೆಲಸ ಮಾಡಿ. ಯಾವುದೇ ಕಾರಣಕ್ಕೂ ಭಯಪಡಬೇಡಿ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲೋಣ. ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಶಿಸ್ತು ಬಹಳ ಅವಶ್ಯಕ ಅನ್ನೋದನ್ನು ಮರೆಯಬೇಡಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಉತ್ತರಪ್ರದೇಶದ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ, ಮಾಜಿ ಸಂಸದರು, ಮಾಜಿ ಶಾಸಕರು, ಕಾಂಗ್ರೆಸ್​ನ ಇತರೆ ಮುಖಂಡರ ಜತೆ ನಿನ್ನೆ ಸಭೆ ನಡೆಸಿದರು. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಸಹಕರಿಸುವಂತೆ ನಾಯಕರಿಗೆ ಮನವಿ ಮಾಡಿದರು.

ಇದನ್ನೂ ಓದಿ:ಶೀಘ್ರದಲ್ಲೇ ನ್ಯಾಯಾಲಯಗಳಲ್ಲಿ ನಡೆಯುವ ವಿಚಾರಣೆಗಳ ನೇರಪ್ರಸಾರ: ನ್ಯಾ. ಎನ್​.ವಿ. ರಮಣ

ಮುಂಬರುವ ಸಮಯದಲ್ಲಿ ರಾಜ್ಯದ ಮಹಿಳೆಯರು ಈ ಮಹಿಳಾ ವಿರೋಧಿ ಸರ್ಕಾರಕ್ಕೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ ಎಂದು ಉತ್ತರಪ್ರದೇಶ ಕಾಂಗ್ರೆಸ್​​ ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.