ನವದೆಹಲಿ: ದೇಶದಲ್ಲಿ ಕೋವಿಡ್ ಮಹಾಮಾರಿ ವಿಜೃಂಬಿಸುತ್ತಿರುವ ಈ ಸಂದರ್ಭದಲ್ಲಿ ಬಾರ್ ಕೌನ್ಸಿಲ್ ಸದಸ್ಯರಿಗೆ ಸುಪ್ರೀಂಕೋರ್ಟ್‌ನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಬಾರ್ ಕೌನ್ಸಿಲ್ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಂಬಿಕೆಯನ್ನ ಕಳೆದುಕೊಳ್ಳಬೇಡಿ, ಪರಿಸ್ಥಿತಿ ಬದಲಾಗುತ್ತದೆ. ಮುಂದೆ ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿದ್ದಾರೆ.
ಕೊರೊನಾ ವೈರಸ್‌ನಿಂದಾಗಿ ಮಾಡಿಕೊಂಡಿರುವ ಬದಲಾವಣೆಗಳ ಬಗ್ಗೆ ಬೆಳಕು ಚೆಲ್ಲಿದ ನಿರ್ಗಮಿತ ಸಿಜೆಐ, ಪ್ರಸ್ತುತ ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆಗೆ ತುಂಬಾ ಪ್ರಾಮುಖ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇನ್ನದೂ ಓದಿ: ಸುಪ್ರೀಂ ಕೋರ್ಟ್‌ನ 48ನೇ ಮುಖ್ಯನಾಯಮೂರ್ತಿಯಾಗಿ ಎನ್‌ವಿ ರಮಣ ಇಂದು ಪದಗ್ರಹಣ
ಮಹಾಮಾರಿಯಿಂದ ಎದುರಾಗಿರುವ ಪರಿಸ್ಥಿತಿಗಳ ಬಗ್ಗೆ ಅಸಮಾಧಾನಗೊಂಡಿರುವ ಬಾರ್ ಕೌನ್ಸಿಲ್‌ನ ಯುವ ಸದಸ್ಯರಿಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ಯಾವುದೇ ಕಾರಣಕ್ಕೂ ನಂಬಿಕೆಯನ್ನು ಕಳೆದುಕೊಳ್ಳಬೇಡಿ. ಮುಂದೆ ಸಾಗುತ್ತಲೇ ಇರಿ. ಪರಿಸ್ಥಿತಿಗಳು ಬದಲಾಗುತ್ತವೆ. ಕೃತಕ ಬುದ್ಧಿಮತ್ತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ನಾವು ನಿರ್ಣಯಿಸಿದ್ದೇವೆ. ಆರ್ಟಿಫಿಷಿಯಲ್ ಇಂಟಿಲಿಜೆನ್ಸಿಯನ್ನು ಹೊಂದಿದರೆ ನಮಗೆ ಸಾಕಷ್ಟು ನಷ್ಟ ಸಂಭವಿಸುತ್ತದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿಯೋಜಿತ ಸಿಜೆಐ ಎನ್‌ವಿ ರಮಣ, ನ್ಯಾಯ ವ್ಯವಸ್ಥೆಯನ್ನು ಮಾರ್ಪಾಡು ಮಾಡಲು ಎಷ್ಟೋ ಆಸಕ್ತಿಯಿಂದ ಸಹೋದರ, ಜಸ್ಟೀಸ್ ಬೊಬ್ಡೆ ಅವರು ಅತ್ಯುನ್ನತ ಪೀಠದಲ್ಲಿ ಕುಳಿತಿದ್ದರು. ಆದರೆ ಕೋವಿಡ್ ಮಹಾಮಾರಿ ಇವರ ಪ್ರಯತ್ನಕ್ಕೆ ಅಡ್ಡಿಯಾಯಿತು. ಆದರೂ ಕೂಡ ತಮ್ಮ ನಂಬಿಕೆಯನ್ನು ಕಳೆದುಕೊಂಡಿರಲಿಲ್ಲ ಎಂದು ಬೊಬ್ಡೆ ಅವರ ಸೇವೆಯನ್ನು ಸ್ಮರಿಸಿದರು.