ETV Bharat / bharat

ಹಿಜಾಬ್ ವಿಚಾರ ಸೆನ್ಸೇಷನ್​ ಮಾಡಬೇಡಿ: ಶೀಘ್ರ ವಿಚಾರಣೆಗೆ ಸುಪ್ರೀಂ ನಕಾರ - ಹಿಜಾಬ್ ಪ್ರಕರಣದ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ

ಹಿಜಾಬ್​ಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದ್ದು, ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

'Don't sensationalise', SC refuses urgent hearing on plea against K'taka HC order on hijab
ಹಿಜಾಬ್ ವಿಚಾರವನ್ನು ಸೆನ್ಸೇಷನ್​ ಮಾಡಬೇಡಿ: ವಿಚಾರಣೆಗೆ ದಿನಾಂಕ ನಿಗದಿಗೆ ಸುಪ್ರೀಂ ತಿರಸ್ಕಾರ
author img

By

Published : Mar 24, 2022, 1:12 PM IST

Updated : Mar 24, 2022, 1:33 PM IST

ನವದೆಹಲಿ: ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ಈ ಹಿಂದೆ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಹಿಜಾಬ್ ಧರಿಸಬೇಕು ಎಂದು ಆದೇಶ ನೀಡಿತ್ತು. ಕರ್ನಾಟಕ ಹೈಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಕೆಲವರಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.

ಹಿರಿಯ ವಕೀಲ ದೇವದತ್ ಕಾಮತ್ ಅವರು ಹಿಜಾಬ್ ಧರಿಸುವ ಮುಸ್ಲಿಂ ವಿದ್ಯಾರ್ಥಿನಿಯರ ಪರವಾಗಿ ಇದ್ದ ಒಂದು ಪ್ರಕರಣವನ್ನು ಪ್ರಸ್ತಾಪಿಸಿ, ಈ ಪ್ರಕರಣವನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಪರೀಕ್ಷೆಗಳು ಸಮೀಪಿಸುತ್ತಿರುವ ಕಾರಣದಿಂದ ತುರ್ತು ವಿಚಾರಣೆ ನಡೆಯಬೇಕೆಂದು ಅವರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಇದಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಈ ವಿಷಯವನ್ನು ಸೆನ್ಸೇಷನ್ ಮಾಡಬೇಡಿ ಎಂದು ಸೂಚನೆ ನೀಡಿತು

Last Updated : Mar 24, 2022, 1:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.