ನವದೆಹಲಿ : ಕೋವಿಡ್ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ. ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ಬಳಿಕ ಅವರು ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ಬಳಿಕ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, "ಡಾ. ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಸಾಧ್ಯವಿರುವ ಎಲ್ಲಾ ಉತ್ತಮ ವೈದ್ಯಕೀಯ ಸೇವೆಗಳನ್ನು ನೀಡಲಾಗ್ತಿದೆ. ನಾವೆಲ್ಲ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸೋಣ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಲಾಕ್‌ಡೌನ್: ರಾಜ್ಯಸಭಾ ನೌಕರರಿಗೆ ವರ್ಕ್ ಫ್ರಮ್ ಹೋಂ
ಕೋವಿಡ್-19 ದೃಢಪಟ್ಟ ಹಿನ್ನೆಲೆ, ಮಾಜಿ ಪ್ರಧಾನಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಡಾ.ಮನಮೋಹನ್ ಸಿಂಗ್ ಸೋಮವಾರ ದೆಹಲಿಯ ಆಲ್ ಇಂಡಿಯಾ ಇನ್ಸ್ಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.