ETV Bharat / bharat

ದೇವಸ್ಥಾನದ ನೆಲ ಗುಡಿಸಿ, ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ದ್ರೌಪದಿ ಮುರ್ಮು ಅವರು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ ಎಂದು ಸಂಸದೀಯ ಮಂಡಳಿ ಸಭೆಯಲ್ಲಿ ನಿನ್ನೆ ಘೋಷಿಸಲಾಗಿದ್ದು, ಈ ಹಿನ್ನೆಲೆ ಇಂದು ದ್ರೌಪದಿ, ರಾಯರಂಗಪುರದ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಾಲಯವನ್ನ ಗುಡಿಸಿ, ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

Draupadi Murmu
ದೇವಸ್ಥಾನದ ನೆಲ ಗುಡಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
author img

By

Published : Jun 22, 2022, 10:41 AM IST

Updated : Jun 22, 2022, 3:00 PM IST

ಒಡಿಶಾ/ ಮಯೂರ್‌ಭಂಜ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಿದೆ. ಜಾರ್ಖಂಡ್​ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ. ಈ ಹಿನ್ನೆಲೆ ದ್ರೌಪದಿ ಮುರ್ಮು ಅವರು ಇಂದು ಬೆಳಗ್ಗೆ ರಾಯರಂಗಪುರದ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಾಲಯವನ್ನ ಗುಡಿಸಿ, ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

  • Congratulations Smt #DraupadiMurmu on being announced as candidate of NDA for the country’s highest office. I was delighted when Hon’ble PM @narendramodi ji discussed this with me. It is indeed a proud moment for people of #Odisha.

    — Naveen Patnaik (@Naveen_Odisha) June 21, 2022 " class="align-text-top noRightClick twitterSection" data=" ">

ದ್ರೌಪದಿ ಮುರ್ಮು ವಿವರ: ದ್ರೌಪದಿ ಮುರ್ಮು ಅವರು ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದಲ್ಲಿ ಜನಿಸಿದರು. ಅವರ ತಂದೆಯ ಹೆಸರು ಬಿರಂಚಿ ನಾರಾಯಣ ಟುಡು. ಸಂತಾಲ್ ಬುಡಕಟ್ಟು ಜನಾಂಗಕ್ಕೆ ಸೇರಿದರಾದ ದ್ರೌಪದಿ, ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾದರು.

ದೇವಸ್ಥಾನದ ನೆಲ ಗುಡಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

1997 ರಲ್ಲಿ ರಾಯರಂಗಪುರ ಪುರಸಭೆಯ ಕೌನ್ಸಿಲರ್ ಆಗಿ ಆಯ್ಕೆಯಾದ ನಂತರ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅದೇ ವರ್ಷ ಅವರು ರಾಯರಂಗಪುರ ಪುರಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಶಾಲಾ ಶಿಕ್ಷಕರಾಗಿ ಮತ್ತು ನಾಲ್ಕು ವರ್ಷಗಳ ಕಾಲ ರಾಜ್ಯ ಸರ್ಕಾರದಲ್ಲಿ 1983 ರವರೆಗೆ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕೆಲಸ ಮಾಡಿದ್ದಾರೆ.

2000 ಮತ್ತು 2004 ರಲ್ಲಿ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರೈರಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. BJD-BJP ಮೈತ್ರಿ ಸಮಯದಲ್ಲಿ ಮಾರ್ಚ್ 6, 2000 ರಿಂದ ಆಗಸ್ಟ್ 6, 2002 ರವರೆಗೆ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ ಸಚಿವರಾಗಿ ಮತ್ತು ಆಗಸ್ಟ್ 6, 2002 ರಿಂದ ಮೇ 16, 2004 ರವರೆಗೆ ಮೀನುಗಾರಿಕೆ ಇಲಾಖೆ ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದಾರೆ . ಜೊತೆಗೆ ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲರಾಗಿ ಕೆಲಸ ಮಾಡಿದ ಅನುಭವವಿದೆ.

ದೇವಸ್ಥಾನದ ನೆಲ ಗುಡಿಸಿ, ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ನವೀನ್ ಪಟ್ನಾಯಕ್ ಟ್ವೀಟ್​: ದೇಶದ ಪ್ರಥಮ ಪ್ರಜೆ ಹಾಗೂ ರಾಷ್ಟ್ರದ ಅತ್ಯುನ್ನತ ಹುದ್ದೆಗೆ NDA ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳು. ನನಗೆ ತುಂಬಾ ಸಂತೋಷವಾಯಿತು. ಒಡಿಶಾದ ಜನರಿಗೆ ಇದು ನಿಜಕ್ಕೂ ಹೆಮ್ಮೆಯ ಕ್ಷಣ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಬಳಿಕ ರಾಷ್ಟ್ರಪತಿಗಳಾದವರು ಯಾರ‍್ಯಾರು?

Last Updated : Jun 22, 2022, 3:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.