ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ದೇಶದ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊದಲ ಅಧ್ಯಕ್ಷರು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇದರ ಜೊತೆಗೆ ದೇಶದ ಅತ್ಯಂತ ಕಿರಿಯ ಪ್ರೆಸಿಡೆಂಟ್ ಹುದ್ದೆ ಅಲಂಕರಿಸಿರುವ ಹಿರಿಮೆಗೂ ಅವರು ಪಾತ್ರರಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದ್ರೌಪದಿ ಮುರ್ಮು ಎದುರಾಳಿ ಯಶವಂತ್ ಸಿನ್ಹಾ ವಿರುದ್ಧ ಭರ್ಜರಿ ಗೆಲುವು ದಾಖಲು ಮಾಡಿದ್ದಾರೆ. ಈ ಮೂಲಕ ರಾಷ್ಟ್ರದ ಪರಮೋಚ್ಚ ಸ್ಥಾನ ಅಲಂಕರಿಸಿದ್ದಾರೆ.

ದ್ರೌಪದಿ ಮುರ್ಮು ಯಾರು?: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ದ್ರೌಪದಿ ಮುರ್ಮು ಅವರು ಒಡಿಶಾದ ಸರಳ ಸಂತಾಲ್ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಒಡಿಶಾದ ರೈರಂಗಪುರದಲ್ಲಿ ಜಿಲ್ಲಾ ಮಂಡಳಿಯ ಕೌನ್ಸಿಲರ್ ಆಗಿ 1997ರಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಮುರ್ಮು ಅವರು, ಎರಡು ಬಾರಿ ಬಿಜೆಪಿ ಶಾಸಕರಾಗಿ, ಒಂದು ಬಾರಿ ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ.

ಜಾರ್ಖಂಡ್‌ನ ರಾಜ್ಯಪಾಲರಾಗಿಯೂ 2015 ರಿಂದ 2020 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಅವರು ತಮ್ಮ ಅಧಿಕಾರಾವಧಿಯಲ್ಲಿ ಎಂದಿಗೂ ವಿವಾದಗಳಿಗೆ ಸಿಲುಕಿದವರಲ್ಲ. ಬುಡಕಟ್ಟು ವ್ಯವಹಾರಗಳು, ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆ, ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರು ಹೆಚ್ಚಿನ ಆಸ್ಥೆ ವಹಿಸಿದವರು. ಒಡಿಶಾ ವಿಧಾನಸಭೆಯಿಂದ ದ್ರೌಪದಿ ಮುರ್ಮು ಅವರಿಗೆ ಅತ್ಯುತ್ತಮ ಶಾಸಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ ಮೊಡಿ ಪ್ರಮಾಣ ಪತ್ರ ನೀಡಿದರು. ಇದರ ಬೆನ್ನಲ್ಲೇ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಅನೇಕರು ಅಭಿನಂದನೆ ಸಲ್ಲಿಸಿದರು.
-
#WATCH | Secretary General of Rajya Sabha and the Returning Officer for Presidential Election 2022, PC Mody hands over the certificate to President-elect #DroupadiMurmu at her residence in Delhi. pic.twitter.com/FMw58FCr6E
— ANI (@ANI) July 21, 2022 " class="align-text-top noRightClick twitterSection" data="
">#WATCH | Secretary General of Rajya Sabha and the Returning Officer for Presidential Election 2022, PC Mody hands over the certificate to President-elect #DroupadiMurmu at her residence in Delhi. pic.twitter.com/FMw58FCr6E
— ANI (@ANI) July 21, 2022#WATCH | Secretary General of Rajya Sabha and the Returning Officer for Presidential Election 2022, PC Mody hands over the certificate to President-elect #DroupadiMurmu at her residence in Delhi. pic.twitter.com/FMw58FCr6E
— ANI (@ANI) July 21, 2022
ದ್ರೌಪದಿ ಮುರ್ಮು ನಡೆದ ಬಂದ ಹಾದಿ ರೋಚಕ: ಬಿಜೆಪಿ ನೇತೃತ್ವದ ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಅಭೂತಪೂರ್ವ ಗೆಲುವು ದಾಖಲು ಮಾಡಿರುವ ದ್ರೌಪದಿ ಮುರ್ಮು ಜೀವನ ರೋಚಕತೆಯಿಂದ ಕೂಡಿದೆ. ದ್ರೌಪದಿ ಮುರ್ಮು ಅವರು ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾಗಿದ್ದು, ಇವರಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬಳು ಮಗಳು ಇದ್ದರು. ಇದರಲ್ಲಿ ಇಬ್ಬರು ಗಂಡು ಮಕ್ಕಳು ಮರಣ ಹೊಂದಿದ್ದಾರೆ. ಪತಿ ಸಹ ಸಾವನ್ನಪ್ಪಿದ್ದಾರೆ. ಇದು ಅವರ ಜೀವನದಲ್ಲಿ ನಡೆದ ದೊಡ್ಡ ದುರಂತವಾಗಿದೆ.

ಭಾರತದ ಕಿರಿಯ ವಯಸ್ಸಿನ ರಾಷ್ಟ್ರಪತಿ: ಕೇವಲ 64ನೇ ವಯಸ್ಸಿನಲ್ಲಿ ದ್ರೌಪದಿ ಮುರ್ಮು ರಾಷ್ಟ್ರಪತಿ ಹುದ್ದೆ ಅಲಂಕಾರ ಮಾಡಿದ್ದು, ಸ್ವಾತಂತ್ರ ಭಾರತದ ನಂತರ ಹುಟ್ಟಿ ಈ ಪದವಿಗೇರಿರುವ ಮೊದಲ ಮಹಿಳೆ ಎಂಬ ಸಾಧನೆಗೂ ಪಾತ್ರರಾಗಿದ್ದಾರೆ. ಜುಲೈ 25 ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
1997 ರಲ್ಲಿ ರಾಯರಂಗ್‌ಪುರ ಅಧಿಸೂಚಿತ ಪ್ರದೇಶ ಕೌನ್ಸಿಲ್‌ನಲ್ಲಿ ಬಿಜೆಪಿ ಕೌನ್ಸಿಲರ್ ಆಗಿ ಆಯ್ಕೆಯಾಗಿ ಅವರು ರಾಜಕೀಯದ ಮೊದಲ ಹೆಜ್ಜೆಗಳನ್ನು ಇಟ್ಟರು. ಮತ್ತು 2000 ರಿಂದ 2004 ರವರೆಗೆ ಒಡಿಶಾದ BJD-BJP ಸಮ್ಮಿಶ್ರ ಸರ್ಕಾರದಲ್ಲಿ ಸಚಿವೆಯಾಗಿ ಕಾರ್ಯನಿರ್ವಹಿಸಿದರು. ಮುರ್ಮು 2014 ರ ವಿಧಾನಸಭಾ ಚುನಾವಣೆಯಲ್ಲಿ ರಾಯರಂಗಪುರದಿಂದ ಸ್ಪರ್ಧಿಸಿದ್ದರು. ಆದರೆ, ಬಿಜೆಡಿ ಅಭ್ಯರ್ಥಿ ಎದುರು ಪರಾಜಯ ಕಂಡಿದ್ದರು.
2015ರಲ್ಲಿ ಅವರನ್ನು ಜಾರ್ಖಂಡ್ ರಾಜ್ಯಪಾಲರಾಗಿ ನೇಮಿಸಲಾಯಿತು. 2021ರ ವರೆಗೆ ಆ ಹುದ್ದೆಯಲ್ಲಿ ಇದ್ದರು. ಜಾರ್ಖಂಡ್ ಗವರ್ನರ್ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ, ಮುರ್ಮು ರಾಯರಂಗ್‌ಪುರದಲ್ಲಿ ಧ್ಯಾನ ಮತ್ತು ಸಾಮಾಜಿಕ ಕಾರ್ಯಗಳಿಗೆ ತನ್ನ ಸಮಯವನ್ನು ಮೀಸಲಿಟ್ಟಿದ್ದರು. ಮುರ್ಮು ಅವರಿಗೆ 2007ರಲ್ಲಿ ಒಡಿಶಾ ವಿಧಾನಸಭೆಯಿಂದ ವರ್ಷದ ಅತ್ಯುತ್ತಮ ಶಾಸಕ ನೀಲಕಂಠ ಪ್ರಶಸ್ತಿ ನೀಡಿ ಸಮ್ಮಾನಿಸಲಾಗಿತ್ತು.

ದ್ರೌಪದಿ ಮುರ್ಮು ವಿದ್ಯಾಭ್ಯಾಸ: ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ದ್ರೌಪದಿ ಮುರ್ಮು ಅವರು ಬಿಎ ಪದವಿ ಪಡೆದಿದ್ದಾರೆ. ಇವರು ಪದವಿ ನಂತರ ಸಹಾಯಕ ಪ್ರೊಫೆಸರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದಲ್ಲದೇ ಒಡಿಶಾ ರಾಜ್ಯದ ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.