ಹೈದರಾಬಾದ್: ಇತ್ತೀಚೆಗೆ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಪ್ರಂಜಲ್ ಪ್ರಭಾಕರ್ ನಕಾತ್ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿಯಾಗಬೇಕೆಂಬ ಅವರ ಕನಸು ಸಹ ಸಾವನ್ನಪ್ಪಿದೆ.
ಮೂಲತಃ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ತಾಲೂಕಿನ ತಾಂಡಲಿ ಎಂಬ ಸಣ್ಣ ಸ್ಥಳದಲ್ಲಿ ಜನಸಿದ್ದ ಇವರಿಗೆ ಕಳೆದ ವಾರದ ಹಿಂದೆ ಕೋವಿಡ್ ಸೋಂಕು ದೃಢಗೊಂಡಿತ್ತು. ಸೋಂಕು ಶ್ವಾಸಕೋಶಕ್ಕೆ ತಗುಲಿ, ಆರೋಗ್ಯ ಸ್ಥಿತಿ ಹದಗೆಡಲು ಶುರುವಾಗಿದ್ದರಿಂದ ಏರ್ ಆ್ಯಂಬುಲೆನ್ಸ್ ಮೂಲಕ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೋವಿಡ್ನಿಂದ ಮೃತಪಟ್ಟಿದ್ದಾರೆ.
ಪೋಷಕರು ಹಾಗೂ ಸಂಬಂಧಿಕರು ಪ್ರಂಜಲ್ ಚಿಕಿತ್ಸೆಗೋಸ್ಕರ 55 ಲಕ್ಷ ರೂ ಖರ್ಚು ಮಾಡಿದ್ದಾರೆ. ಇಷ್ಟಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಡೆಡ್ಲಿ ವೈರಸ್ಗೆ ಬಲಿಯಾಗಿದ್ದಾರೆ.
ಇದನ್ನೂ ಓದಿ: ಯಾರಿಗೂ ಗೊತ್ತಿಲ್ಲದಂತೆ ಮೊಟ್ಟೆ ಕದ್ದ ಪೊಲೀಸ್.. ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ!
ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಪ್ರಂಜಲ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಬೇಕು ಎಂಬು ಆಸೆ ಇಟ್ಟುಕೊಂಡಿದ್ದರು. ಆದರೆ, ವಿಧಿಯಾಟದ ಮುಂದೆ ಸೋತು, ಇಹಲೋಕ ತ್ಯಜಿಸಿದ್ದಾರೆ. ಇವರ ಸಾವಿಗೆ ಸ್ನೇಹಿತರು, ಸಂಬಂಧಿಕರು ಶೋಕ ವ್ಯಕ್ತಪಡಿಸಿದ್ದಾರೆ.