ಚಂಡೀಗಢ(ಹರಿಯಾಣ): ಹರಿಯಾಣದ ನುಹ್ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದಾಗ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಡಿಎಸ್ಪಿ ಸುರೇಂದ್ರ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಚಿತ ಆಧಾರದ ಮೇಲೆ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಡಿಎಸ್ಪಿ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ತೆರಳಿದ್ದರು. ಈ ವೇಳೆ, ಅವರ ಮೇಲೆ ಟ್ರಕ್ ಹರಿಸಲಾಗಿದ್ದು, ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ನುಹ್ನ ಪಚ್ಗಾಂವ್ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಈ ಸ್ಥಳಕ್ಕೆ ಬೆಳಗ್ಗೆ 11 ಗಂಟೆಗೆ ಸುರೇಂದ್ರ ಸಿಂಗ್ ಬಿಷ್ಣೋಯ್ ನೇತೃತ್ವದ ತಂಡ ಆಗಮಿಸಿತ್ತು. ಈ ವೇಳೆ, ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವೇಳೆ ಕಲ್ಲು ತುಂಬಿದ್ದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆಸಲಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಪೊಲೀಸರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
-
Haryana | Tawadu (Mewat) DSP Surendra Singh Bishnoi, who had gone to investigate an instance of illegal mining in Nuh, died after being run over by a dumper driver. Search operation is underway to apprehend the accused. Details awaited: Nuh Police pic.twitter.com/Q1xjdUPWE2
— ANI (@ANI) July 19, 2022 " class="align-text-top noRightClick twitterSection" data="
">Haryana | Tawadu (Mewat) DSP Surendra Singh Bishnoi, who had gone to investigate an instance of illegal mining in Nuh, died after being run over by a dumper driver. Search operation is underway to apprehend the accused. Details awaited: Nuh Police pic.twitter.com/Q1xjdUPWE2
— ANI (@ANI) July 19, 2022Haryana | Tawadu (Mewat) DSP Surendra Singh Bishnoi, who had gone to investigate an instance of illegal mining in Nuh, died after being run over by a dumper driver. Search operation is underway to apprehend the accused. Details awaited: Nuh Police pic.twitter.com/Q1xjdUPWE2
— ANI (@ANI) July 19, 2022
ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗೋಸ್ಕರ ಇದೀಗ ಶೋಧಕಾರ್ಯ ಆರಂಭಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಭೇಟಿ ನೀಡಿದ್ದಾರೆ. 2009ರ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಕಲ್ಲು ಗಣಿಗಾರಿಕೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಆದರೆ, ಅನೇಕ ಸ್ಥಳಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗ್ತಿದೆ.ಅಂತಹ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ.