ETV Bharat / bharat

ಟ್ರಕ್​ ಹರಿಸಿ ಡಿಎಸ್​​ಪಿ ಹತ್ಯೆ ಪ್ರಕರಣ: ಒಬ್ಬ ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು - ಹರಿಯಾಣ ಡಿಎಸ್​ಪಿ ಕೊಲೆ ಪ್ರಕರಣ

ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿದ್ದ ಡಿಎಸ್​ಪಿ ಮೇಲೆ ಟ್ರಕ್ ಹರಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯ ಬಂಧನ ಮಾಡಲಾಗಿದೆ.

DSP Murder in Haryana
DSP Murder in Haryana
author img

By

Published : Jul 19, 2022, 10:50 PM IST

ಚಂಡೀಗಢ(ಹರಿಯಾಣ): ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ತೆರಳಿದ್ದ ಡಿಎಸ್​​ಪಿ ಮೇಲೆ ಟ್ರಕ್​ ಹರಿಸಿ, ಹತ್ಯೆ ಮಾಡಿರುವ ಘಟನೆ ಹರಿಯಾಣದ ನುಹ್​ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಡಿಎಸ್​ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಂದ್ರ ಸಿಂಗ್​ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದು. ಆತನ ಕಾಲಿಗೆ ಗುಂಡು ಬಿದ್ದಿದೆ. ಸದ್ಯ ಆತನಿಗೆ ಮೇವಾಟಿ ವೈದ್ಯಕೀಯ ಕಾಲೇಜಿ​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಟ್ರಕ್​ ಚಾಲಕ ಮತ್ತು ಇತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗೋಸ್ಕರ ಶೋಧಕಾರ್ಯ ಮುಂದುವರೆದಿದೆ.

ಘಟನೆಯಲ್ಲಿ ಸಾವನ್ನಪ್ಪಿರುವ ಡಿಎಸ್​ಪಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್​ ಘೋಷಣೆ ಮಾಡಿದ್ದಾರೆ. ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಿಳಿಸಿದ್ದು, ಡಿಎಸ್​ಪಿ ಸುರೇಂದ್ರ ಸಿಂಗ್​​ ಅವರಿಗೆ ಹುತಾತ್ಮ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿರಿ: ಅಕ್ರಮ ಗಣಿಗಾರಿಕೆ ತಡೆಯಲು ಹೋದ ಡಿಎಸ್​​ಪಿ ಮೇಲೆ ಟ್ರಕ್​ ಹರಿಸಿ ಕೊಲೆ.. ಹರಿಯಾಣದಲ್ಲಿ ಭೀಕರ ಘಟನೆ

ನುಹ್​​ನ ಪಚ್​ಗಾಂವ್​ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಈ ಸ್ಥಳಕ್ಕೆ ಬೆಳಗ್ಗೆ 11 ಗಂಟೆಗೆ ಸುರೇಂದ್ರ ಸಿಂಗ್ ಬಿಷ್ಣೋಯ್​​ ನೇತೃತ್ವದ ತಂಡ ಆಗಮಿಸಿತ್ತು. ಈ ವೇಳೆ, ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ಕಲ್ಲು ತುಂಬಿದ್ದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆಸಲಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಪೊಲೀಸರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.