ಸೂರತ್(ಗುಜರಾತ್): ನೀವು ಎಲೆಕ್ಟ್ರಿಕಲ್ ಸ್ಕೂಟಿ ಬಯಸುವುದಾದರೆ ಜಾಗರೂಕರಾಗಿರಿ! ಕೆಲವೊಮ್ಮೆ ಎಲೆಕ್ಟ್ರಿಕಲ್ ಸ್ಕೂಟಿಯ ಬ್ಯಾಟರಿ ಚಾರ್ಜ್ ಮಾಡುವಾಗ ಅದು ಸ್ಫೋಟಗೊಳ್ಳುವ ಸಾಧ್ಯತೆಯಿದೆ. ಇದೀಗ ಸೂರತ್ನಲ್ಲಿ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.
ಸೂರತ್ನ ಸಚಿನ್ ಪಟ್ಟಣದ ಕಿರಾಣಿ ಅಂಗಡಿಯೊಂದರಲ್ಲಿ ಎಲೆಕ್ಟ್ರಿಕಲ್ ಸ್ಕೂಟಿಯ ಬ್ಯಾಟರಿಯನ್ನು ಚಾರ್ಜ್ ಮಾಡಲು ಇಡಲಾಗಿತ್ತು. ಈ ವೇಳೆ ಬ್ಯಾಟರಿ ಸ್ಫೋಟಗೊಂಡಿದ್ದು, ಅಂಗಡಿ ಮಾಲೀಕ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿನ್ ಪಟ್ಟಣದ ಮಹಾಲಕ್ಷ್ಮಿ ನಗರ ನಿವಾಸಿ ಜೈಲಾಲ್ ಮುನಿಲಾಲ್ ಬಿಂದ್(58) ಕಿರಾಣಿ ಅಂಗಡಿ ನಡೆಸುತ್ತಿದ್ದರು. ಇವರು ಮಧ್ಯಾಹ್ನದ ಸಮಯದಲ್ಲಿ ತನ್ನ ಸ್ನೇಹಿತ ಮಹೇಶ್ ಎಂಬವರನ್ನು ಭೇಟಿಯಾಗಿದ್ದರು. ಈ ವೇಳೆ ಅವರು ಸ್ಕೂಟಿ ಬ್ಯಾಟರಿಯನ್ನು ಚಾರ್ಜ್ ಮಾಡಲೆಂದು ಅಂಗಡಿಯಲ್ಲಿ ಇಟ್ಟಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಬ್ಯಾಟರಿ ಸ್ಫೋಟಗೊಂಡಿದ್ದು, ಮುನಿಲಾಲ್ ಸೇರಿದಂತೆ ಇಬ್ಬರು ಮಕ್ಕಳಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಅಲ್ಲದೇ ಅಂಗಡಿಗೂ ಬೆಂಕಿ ಹೊತ್ತಿಕೊಂಡಿದ್ದು, ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.
ಇದನ್ನೂ ಓದಿ:ಜೋಧ್ಪುರ ಸಿಲಿಂಡರ್ ಸ್ಫೋಟ ಪ್ರಕರಣ; 17 ಲಕ್ಷ ರೂ ಪರಿಹಾರ ನೀಡಿದ ರಾಜಸ್ಥಾನ ಸರ್ಕಾರ