ETV Bharat / bharat

ಕೋವ್ಯಾಕ್ಸಿನ್​, ಕೋವಿಶೀಲ್ಡ್​​​ ಲಸಿಕೆಗೆ 275ರೂ. ನಿಗದಿ? - price of Covishield

Covishield, Covaxin likely to be capped at Rs 275: ಕೋವಿಡ್ ಲಸಿಕಾ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಇದೀಗ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗ್ತಿರುವ ಕೋವಿಡ್ ಲಸಿಕೆ ಬೆಲೆಯಲ್ಲಿ ಇಳಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

price of Covishield and Covaxin
price of Covishield and Covaxin
author img

By

Published : Jan 26, 2022, 10:58 PM IST

ನವದೆಹಲಿ: ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಕೋವಿಡ್ ಲಸಿಕೆಗಳು ಶೀಘ್ರದಲ್ಲೇ ಭಾರತದ ಔಷಧ ನಿಯಂತ್ರಣ ಪ್ರಾಧಿಕಾರದಿಂದ ಮಾರುಕಟ್ಟೆಗೋಸ್ಕರ ಅನುಮೋದನೆ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಪ್ರತಿ ಡೋಸ್​​​ಗೆ 275ರೂ. ಜೊತೆಗೆ ಹೆಚ್ಚುವರಿ ಸೇವಾ ಶುಲ್ಕವಾಗಿ 150 ರೂ. ನಿಗದಿ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಪ್ರತಿ ಡೋಸ್​ಗೆ 1,200 ಮತ್ತು ಕೋವಿಶೀಲ್ಡ್​​​ ಪ್ರತಿ ಡೋಸ್​ಗೆ 780 ರೂ. ಇದೆ. ಇದು ಸೇವಾ ಶುಲ್ಕ ಸಹ ಒಳಗೊಂಡಿದೆ. ಇದೀಗ ಖಾಸಗಿ ಅಸ್ಪತ್ರೆಗಳಲ್ಲೂ ಲಸಿಕೆಗಳು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಭಾರತದಲ್ಲಿ ಲಭ್ಯವಾಗುತ್ತಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಉಚಿತವಾಗಿ ನೀಡಲಾಗ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಇವುಗಳಿಗೆ ದರ ನಿಗದಿ ಮಾಡಲಾಗಿದೆ. ಇದೀಗ ಈ ಬೆಲೆಯಲ್ಲಿ ಮತ್ತಷ್ಟು ಕಡಿತಗೊಳಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿರಿ: ನಕಲಿ ನೋಟು ದಂಧೆ ಭೇದಿಸಿದ ಪೊಲೀಸರು: 7 ಕೋಟಿ ರೂಪಾಯಿ ಫೇಕ್​ ಕರೆನ್ಸಿ ವಶಕ್ಕೆ

ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾ, ರಾಷ್ಟ್ರೀಯ ಫಾರ್ಮಾ ಬೆಲೆ ನಿಗದಿ ಕೇಂದ್ರ ಈ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಈ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಕಳೆದ ಒಂದು ವರ್ಷದಿಂದ ಭಾರತದಲ್ಲಿ ಕೋವಿಡ್​ ವ್ಯಾಕ್ಸಿನ್​ ನೀಡಲಾಗ್ತಿದ್ದು, ಈಗಾಗಲೇ 160 ಕೋಟಿಗೂ ಅಧಿಕ ಡೋಸ್​ ಕೋವಿಡ್​ ವ್ಯಾಕ್ಸಿನ್ ನೀಡಲಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.