ETV Bharat / bharat

ಅಕ್ಟೋಬರ್ 10 ರಿಂದ 13 ರವರೆಗೆ ಜೈ ಶಂಕರ್​​ ಕಿರ್ಗಿಸ್ತಾನ್, ಕಜಕಿಸ್ತಾನ್ ಅರ್ಮೇನಿಯಾಕ್ಕೆ ಭೇಟಿ - ಕಿರ್ಗಿಸ್ತಾನ್, ಕಜಕಿಸ್ತಾನ್ ಅರ್ಮೇನಿಯಾ

ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, ಅಕ್ಟೋಬರ್ 10 ರಿಂದ 13 ರವರೆಗೆ ಕಿರ್ಗಿಸ್ತಾನ್, ಕಜಕಿಸ್ತಾನ್ ಮತ್ತು ಅರ್ಮೇನಿಯಾಕ್ಕೆ ಭೇಟಿ ನೀಡಲಿದ್ದಾರೆ.

Jaishankar
Jaishankar
author img

By

Published : Oct 9, 2021, 3:31 PM IST

ನವದೆಹಲಿ: ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, ಅಕ್ಟೋಬರ್ 10 ರಿಂದ 13 ರವರೆಗೆ ಕಿರ್ಗಿಸ್ತಾನ್, ಕಜಕಿಸ್ತಾನ್ ಮತ್ತು ಅರ್ಮೇನಿಯಾಕ್ಕೆ ಭೇಟಿ ನೀಡಲಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸುವ ಸಲುವಾಗಿ ಈ ಪ್ರವಾಸ ಕೈಗೊಂಡಿದ್ದಾರೆ.

ಅಕ್ಟೋಬರ್ 10 ಮತ್ತು 11 ರಂದು ಸಚಿವರು ಕಿರ್ಗಿಸ್ತಾನ್​ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ವೇಳೆ ಕಿರ್ಗಿಸ್​​​ ಅಧ್ಯಕ್ಷರನ್ನು ಭೇಟಿ ಮಾಡುವ ಬದಲು ಅಲ್ಲಿನ ವಿದೇಶಾಂಗ ಸಚಿವರ ಜತೆ ಸಭೆ ನಡೆಸಲಿದ್ದಾರೆ. ಈ ವೇಳೆ, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ ಎಂದು ಎಂಇಎ ತಿಳಿಸಿದೆ.

ಅಕ್ಟೋಬರ್ 11 ರಂದು ಕಜಕಿಸ್ತಾನ್​ಗೆ ತೆರಳಲಿರುವ ಮಿನಿಸ್ಟರ್​​​ ನಜರ್ - ಸುಲ್ತಾನ್‌ನಲ್ಲಿ ನಡೆಯಲಿರುವ ಏಷ್ಯಾದಲ್ಲಿ ಸಂವಹನ ಮತ್ತು ಆತ್ಮವಿಶ್ವಾಸ ನಿರ್ಮಾಣ ಕ್ರಮಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿನ ಉಪ ಪ್ರಧಾನಿ, ವಿದೇಶಾಂಗ ಸಚಿವರ ಜತೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ರಾಜತಾಂತ್ರಿಕ ಅಧಿಕಾರಿಗೆ ಕಿರುಕುಳ ಆರೋಪ : ಓರ್ವನ ಬಂಧನ

ಅಕ್ಟೋಬರ್ 12 ರಂದು ಸಚಿವ ಜೈ ಶಂಕರ್ ಅರ್ಮೇನಿಯಾಕ್ಕೆ ಭೇಟಿ ನೀಡಲಿದ್ದಾರೆ. ಅರ್ಮೇನಿಯಾಕ್ಕೆ ಸಚಿವರ ಮೊದಲ ಭೇಟಿ ಇದಾಗಿದ್ದು, ಅಲ್ಲಿನ ಪ್ರಧಾನಿ ಹಾಗೂ ರಾಷ್ಟ್ರೀಯ ಅಸೆಂಬ್ಲಿಯ ಅಧ್ಯಕ್ಷರನ್ನು ಭೇಟಿಯಾಗುತ್ತಾರೆ ಎಂದು ಸಚಿವಾಲಯ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.