ಕರೌಲಿ (ರಾಜಸ್ಥಾನ): ಜಿಲ್ಲೆಯ ಸಪೋತ್ರಾ ಉಪವಿಭಾಗದ ಸಿಮಾರ್‌ನ ಮೆಂಡ್‌ಪುರ ಗ್ರಾಮದಲ್ಲಿ ಮಣ್ಣಿನ ಗುಡ್ಡ ಕುಸಿದು ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಅಂಕಿತ್ ಕುಮಾರ್ ಸಿಂಗ್ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇದೇ ವೇಳೆ ಡಿಸಿ ಮಾಹಿತಿ ನೀಡಿದ್ದಾರೆ.
ತಾವು ಮೇದ್‌ಪುರ ಗ್ರಾಮದ ನಿವಾಸಿಗಳಾಗಿದ್ದು, ಕೆಲಸ ಮಾಡಲು ಹೊಲಕ್ಕೆ ಹೋಗುತ್ತಿದ್ದಾಗ ಡಾಂಬರು ಹಾಕದ ರಸ್ತೆಯಲ್ಲಿ ಸಾಗುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಬಿದ್ದಿದೆ ಎಂದು ಗಾಯಾಳುಗಳು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಗುರುತು ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ:ಪಿತೋರಗಢದಲ್ಲಿ ಮೇಘಸ್ಪೋಟ ನದಿಯಲ್ಲಿ ಹರಿದು ಬಂತು ಕಲ್ಲು ಮರಳು ರಾಶಿ